ಬ್ರೇಕಿಂಗ್ ನ್ಯೂಸ್
02-07-24 01:41 pm Mangalore Correspondent ಕರಾವಳಿ
ಉಳ್ಳಾಲ, ಜು.02: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ (27) ಮೃತ ದುರ್ದೈವಿ. ಗಣೇಶ್ ಆಚಾರ್ಯ ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಜೂ.28 ರಂದು ಬೆಳಗ್ಗೆ ಗಣೇಶ್ ಅವರು ಪಾವೂರು ಹರೇಕಳದಿಂದ ಕೊಣಾಜೆಗೆ ತೆರಳುವ ವೇಳೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿತ್ತು. ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಗಣೇಶ್ ಅವರು ಚಲಿಸುತ್ತಿದ್ದ ಸ್ಕೂಟರನ್ನ ಓವರ್ ಟೇಕ್ ಮಾಡುವ ಧಾವಂತದಲ್ಲಿ ಅಪಘಾತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ಗಣೇಶ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಟಿಪ್ಪರ್ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್ ಅವರು ಕುಟುಂಬಕ್ಕೆ ಆಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದರಿಂದ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ದಾನಿಗಳ ನೆರವು ಕೋರಿದ್ದರು.
Mangalore Truck bike accident at Harekala in ullal, 27 year old youth dies in hospital. The deceased has been identified as Ganesh Acharya. On 28th of June he met with an accident and today he breathed his last in the hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am