ಬ್ರೇಕಿಂಗ್ ನ್ಯೂಸ್
02-07-24 06:39 pm Mangalore Correspondent ಕರಾವಳಿ
ಮಂಗಳೂರು, ಜು.2: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ಇರುವುದಿಲ್ಲ. ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಿರುವುದರಿಂದ ಅವಕಾಶ ನೀಡುವುದಿಲ್ಲ. ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಲು ಸಾಫ್ಟ್ವೇರ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಮಂಗಳೂರು ವೃತ್ತದ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಗಂಗಡಿಕಲ್ಲು, ನರಸಿಂಹ ಪರ್ವತಗಳಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ಆನ್ ಲೈನ್ ವ್ಯವಸ್ಥೆ ಮಾಡಿದೆ. ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ಚಾರಣಿಗರ ಸಂಖ್ಯೆಗೆ ಮಿತಿ ;
ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್ ಗಳು) ಚಾರಣ ಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮ ಚಾರಣ ಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಹೇಳಿದರು.
ಪ್ರತಿ ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಸೌಲಭ್ಯವನ್ನು ಗಮನದಲ್ಲಿಟ್ಟು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ದಿನದಲ್ಲಿ 300ಕ್ಕಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು. ಒಂದೊಮ್ಮೆ ಯಾವುದೇ ಚಾರಣ ಪಥದಲ್ಲಿ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಂದೇ ವೆಬ್ ಸೈಟ್ ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ವಿವರಿಸಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಉಪಸ್ಥಿತರಿದ್ದರು.
Minister Eshwar Khandre in Mangalore, online tickets to visit tourist destination. State Forest and Environment Minister Eshwar B Khandre underscored the global urgency posed by climate change and global warming, asserting that environmental protection is paramount for a prosperous future
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm