ಬ್ರೇಕಿಂಗ್ ನ್ಯೂಸ್
04-07-24 03:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮತ್ತೆ ಮೈದುಂಬಿಕೊಂಡು ಹರಿಯುತ್ತಿವೆ. ಆದರೆ ಭೋರ್ಗರವೆ ನೀರಿನಲ್ಲಿ ಅಪಾಯ ಇರುವುದರಿಂದ ಪಶ್ಚಿಮ ಘಟ್ಟಗಳ ಜಲಪಾತ, ಟ್ರಕ್ಕಿಂಗ್ ಪಾಯಿಂಟ್ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಮಳೆಗಾಲ ಸಮಯದಲ್ಲಿ ಜಲಪಾತ, ಟ್ರಕ್ಕಿಂಗ್ ಹೋಗುವುದಕ್ಕೆ ಬೆಂಗಳೂರಿನ ಜನ ಇಷ್ಟ ಪಡುತ್ತಾರೆ. ಆದರೆ ಮಳೆ ಹೆಚ್ಚಿರುವುದರಿಂದ ಟ್ರೆಕ್ಕಿಂಗ್, ಜಲಪಾತ ಹೋಗುವವರಿಗೆಲ್ಲ ಮುಂದಿನ ಸೂಚನೆ ವರೆಗೂ ಬ್ರೇಕ್ ಹಾಕಲಾಗಿದೆ.
ಕರಾವಳಿ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಕಾಡಿನ ಮಧ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಮಂಗಳೂರು ಅರಣ್ಯ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳಿಗೆ ಜನಸಾಮಾನ್ಯರ ಭೇಟಿಯನ್ನು ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್ಎಫ್ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಫಾಲ್ಸ್ ನಿರ್ಬಂಧ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಗಾವಳಿ ನದಿ ಭೋರ್ಗರೆಯುತ್ತಿದ್ದು ನೀರಿನ ಹೆಚ್ಚಳದಿಂದ ಕಾರವಾರ ತಾಲೂಕಿನ ಫಾಲ್ಸ್ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳ ಭೇಟಿಗೆ ಅರಣ್ಯ ಇಲಾಖೆಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ಕಾರವಾರ ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.
Entry for water falls and sightseeing in Mangalore Udupi and uttar karnataka restricted due to heavy rains. People from various districts come to visit water falls and do trekking for which the adminstration has put a full stop for safety purpose.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am