ಬ್ರೇಕಿಂಗ್ ನ್ಯೂಸ್
06-07-24 01:41 pm Mangalore Correspondent ಕರಾವಳಿ
ಮಂಗಳೂರು, ಜುಲೈ.6: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮೂಡಾ ಸೈಟ್ ಮಾರಾಟ ಪ್ರಕರಣದಲ್ಲಿ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ರವಿ ಕುಮಾರ್ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳು ಸಮಾಜವಾದ ಹಿನ್ನೆಲೆಯಿಂದ ಬಂದವರು ಅಂತ ಹೇಳಿಕೊಳ್ಳುತ್ತಿದ್ದರು. ನನಗೂ ಭ್ರಷ್ಟಾಚಾರಕ್ಕೂ ಸಾಸಿವೆ ಕಾಳಷ್ಟು ಸಂಬಂಧ ಇಲ್ಲ ಎಂದು ಹೇಳುತ್ತಾ ಬಂದಿದ್ದರು. ಆದರೆ ಎರಡನೇ ಬಾರಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಸಮಾಜವಾದಕ್ಕೆ ತಿಲಾಂಜಲಿ ಇಟ್ಟಿದ್ದಾರೆ. ಮೈಸೂರು ಮೂಡಾದಲ್ಲಿ ತನ್ನ ಪತ್ನಿಗೆ 14 ಸೈಟು ಮಾಡಿಸಿಕೊಡ್ತಾರೆ. 35 ಕೋಟಿ ಕೊಟ್ಟು 14 ಸೈಟು ತಗೋಳ್ತಾರೆ ಅಂದ್ರೆ ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ನೀವು ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಿಮ್ಮ ಸಮಾಜವಾದ ಆದರ್ಶ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ರವಿಕುಮಾರ್, ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹೇಗೆ ಗ್ಯಾರಂಟಿಗೆ ಬಳಸುತ್ತೀರಾ? ಎಸ್ ಸಿ ಗಳಿಗೆ, ಎಸ್ಟಿ ಗಳಿಗೆ ದಲಿತರಿಗೆ ಮಹಾ ದ್ರೋಹ ಮಾಡಿದ ಸಿಎಂ ಎಂದರೆ ಅದು ಸಿದ್ದರಾಮಯ್ಯ. ಬಹಳ ಬುದ್ಧಿವಂತರಾದ ಸಿದ್ದರಾಮಯ್ಯ, ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, 4ರಿಂದ 5 ಲಕ್ಷ ಬೆಲೆ ಬಾಳುವ ಜಮೀನನ್ನ ಮೂಡಾಕ್ಕೆ ಕೊಟ್ಟು ಈಗ 62 ಕೋಟಿ ರೂಪಾಯಿ ಕೇಳ್ತಾ ಇದ್ದಾರೆ. ಇಡೀ ರಾಜ್ಯದಲ್ಲಿ ಈ ಹಿಂದೆ ರೈತರು ಕಡಿಮೆ ಬೆಲೆಗೆ ಜಮೀನನ್ನು ಕೊಟ್ಟಿದ್ದಾರೆ. ಈಗ ಅದು ಕೋಟ್ಯಂತರ ಮೌಲ್ಯದ ಫ್ಲಾಟ್ ಸೈಟ್ ಆಗಿ ಪರಿವರ್ತನೆಯಾಗಿದೆ.
ಈಗ ಆ ಎಲ್ಲಾ ರೈತರು ಅಷ್ಟೇ ಮೊತ್ತ ಕೇಳಿದ್ರೆ ಕೋಟಿ ಕೊಡ್ತೀರಾ? ನೀವು ಭ್ರಷ್ಟ ಮುಖ್ಯಮಂತ್ರಿಯಾಗಿದ್ದೀರಿ, ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದ್ದೀರಿ. 700 ಅಕೌಂಟ್ ಗಳಿಗೆ ಹಣ ಸಂದಾಯ ಮಾಡಿ ಡ್ರಾ ಮಾಡಿಸಿದ್ದೀರಿ. ವಾಲ್ಮೀಕಿ ನಿಗಮದ ಹಗರಣದ ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ಕೊಟ್ರು. ನೀವು ಈಗ ಸೈಟ್ ಗಳಲ್ಲಿ ಭ್ರಷ್ಟಾಚಾರ ಮಾಡಿದ್ದೀರಾ.. ನೀವು ಕೂಡ ರಾಜೀನಾಮೆ ಕೊಟ್ಟು ಮಾತನಾಡಿ ಎಂದು ಆಗ್ರಹಿಸಿದರು.
Siddaramaiah’s wife lost land worth Rs 57 crore to MUDA, cm should resign says MLC Ravi Kumar in Mangalore. Siddaramaiah’s wife is ready to return the alternative sites provided by MUDA, if the authority returns her 3.16 acres land at Kesare village, A S Ponnanna, the legal adviser to chief minister said.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm