ಬ್ರೇಕಿಂಗ್ ನ್ಯೂಸ್
06-07-24 04:45 pm Mangalore Correspondent ಕರಾವಳಿ
ಬೆಂಗಳೂರು, ಜುಲೈ 6: ತನ್ನ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪೊಲೀಸರು ಚಾರ್ಜ್ ಶೀಟ್ ಹಾಕಿರುವುದರಿಂದ ಕೆಳಗಿನ ಕೋರ್ಟಿನಲ್ಲೇ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚಿಸಿ ಅರ್ಜಿಯನ್ನು ವಜಾ ಮಾಡಿದೆ.
ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧಿತನಾಗಿದ್ದ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಠಾಣೆಗೆ ನುಗ್ಗಿ ಪೊಲೀಸರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರು. ಆನಂತರ, ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಪ್ರತಿಭಟನೆ ನಡೆಸಿ, ಮತ್ತೆ ಪೊಲೀಸರ ಮೇಲೆ ಹರಿಹಾಯ್ದಿದ್ದರು. ಇವೆರಡು ಘಟನೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಎರಡು ಪ್ರತ್ಯೇಕ ಎಫ್ಐರ್ ದಾಖಲು ಮಾಡಿದ್ದರು. ಆನಂತರ, ಎಸ್ಪಿ ರಿಷ್ಯಂತ್ ಸಿಂಗ್ ಸೂಚನೆಯ ಮೇರೆಗೆ ಶಾಸಕರನ್ನು ಬಂಧಿಸುವುದಕ್ಕೂ ಪೊಲೀಸರು ಮುಂದಾಗಿದ್ದರು. ಕೊನೆಗೆ ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ ಹಿನ್ನೆಲೆಯಲ್ಲಿ ಬಂಧನ ಕ್ರಮವನ್ನು ಪೊಲೀಸರು ಕೈಬಿಟ್ಟಿದ್ದರು.
ಇದರ ಬೆನ್ನಲ್ಲೇ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಹರೀಶ್ ಪೂಂಜ ಪರ ವಕೀಲರು, ಎಫ್ಐಆರ್ ರದ್ದು ಪಡಿಸಲು ಕೇಳಿಕೊಂಡಿದ್ದರು. ಆದರೆ ಅರ್ಜಿ ಸ್ವೀಕರಿಸಿದ ನ್ಯಾಯಾಧೀಶ ಕೃಷ್ಣ ಎಸ್. ದೀಕ್ಷಿತ್ ಪೊಲೀಸರ ಮೇಲೆ ನಿಂದಿಸಿದ್ದನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಲ್ಲದೆ, ಹರೀಶ್ ಪೂಂಜ ವರ್ತನೆಗೆ ಛೀಮಾರಿ ಹಾಕಿದ್ದರು. ಇದೇ ರೀತಿಯಾದರೆ ಮುಂದೆ ನ್ಯಾಯಾಧೀಶರ ಕರ್ತವ್ಯಕ್ಕೂ ನೀವು ಅಡ್ಡಿ ಪಡಿಸಬಹುದು ಎಂದು ಕಿಡಿಕಾರಿದ್ದರು. ವಿಚಾರಣೆ ಮುಗಿಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿರುವ ಅಂಶವನ್ನು ಪರಿಗಣಿಸಿ ಎಫ್ಐಆರ್ ರದ್ದುಪಡಿಸಲು ನಿರಾಕರಿಸಿತು. ಅಲ್ಲದೆ, ಎಫ್ಐಆರ್ ರದ್ದು ಕೋರಿ ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಆದೇಶ ನೀಡಿದೆ.
ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ಅರ್ಜಿದಾರರು ಆರೋಪ ಕೈಬಿಡುವಂತೆ ವಿಚಾರಣಾ ನ್ಯಾಯಾಲಯಕ್ಕೇ ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಅರ್ಜಿ ವಿಚಾರಣೆ ಪೂರ್ತಿಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯ ವರೆಗೆ ಆರೋಪ ಪಟ್ಟಿ ಕುರಿತ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಬಾರದು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಹರೀಶ್ ಪೂಂಜ ತಾನೊಬ್ಬ ಶಾಸಕನೆಂಬ ಅಹಂಕಾರದಿಂದ ಪೊಲೀಸರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರು. ಅಲ್ಲದೆ, ಎಸ್ಪಿ ರಿಷ್ಯಂತ್ ಸಿಂಗ್ ಅವರ ಬಗ್ಗೆ ಕೇವಲವಾಗಿ ಮಾತನಾಡಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೂ ಗುರಿಯಾಗಿತ್ತು. ಅದೇ ಕಾರಣಕ್ಕೆ ಪೊಲೀಸರು ನಾಲ್ಕೇ ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಸಿ ಹರೀಶ್ ಪೂಂಜ ವಿರುದ್ಧ ಹಗೆ ತೀರಿಸಿಕೊಂಡಿದ್ದರು. ಪೊಲೀಸರ ಈ ನಡೆಯೇ ಶಾಸಕರ ಮೇಲಿನ ಎಫ್ಐಆರ್ ರದ್ದುಪಡಿಸುವುದಕ್ಕೆ ತಡೆಯಾಗಿ ಪರಿಣಮಿಸಿದೆ. ಆರೋಪ ಪಟ್ಟಿ ಸಲ್ಲಿಕೆ ಆಗಿರುವುದರಿಂದ ತಾಂತ್ರಿಕವಾಗಿ ಎಫ್ಐಆರ್ ರದ್ದುಪಡಿಸುವುದು ಸಾಧ್ಯವಾಗಲ್ಲ. ಹೀಗಾಗಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿದೆ.
The Karnataka High Court has directed Belthangady MLA Harish Poonja to seek legal remedy from the trial court to quash charges filed against him for protesting and using abusive language against the police.
26-08-25 06:06 pm
Bangalore Correspondent
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm