ಬ್ರೇಕಿಂಗ್ ನ್ಯೂಸ್
08-07-24 12:44 pm Mangalore Correspondent ಕರಾವಳಿ
ಉಳ್ಳಾಲ, ಜು.8: ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರಹ್ಮಾನ್ ಅಲ್ ಬುಖಾರಿ ತಂಞಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ(ಕೂರತ್ ತಂಞಳ್) ತಂಞಳ್ ಅಲ್ ಬುಖಾರಿ(65) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯಾಘಾತದಿಂದ ತಂಞಳ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ದರಾಗುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪಾರ್ಥಿವ ಶರೀರವು ಇಂದು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಪಾರ್ಥಿವ ಶರೀರವನ್ನು ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ತಿಳಿಸಿದ್ದಾರೆ.
ಕೂರತ್ ತಂಞಳ್ ಅವರು 2014ರಲ್ಲಿ ತಾಜುಲ್ ಉಲಮಾ ನಿಧನರಾದ ಬಳಿಕ ಉಳ್ಳಾಲ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Assayed Hamid Fazal Koyamma Thangal Madani, the Qazi of Ulllal, passed away in Kerala on Monday July 8. Fazal Koyamma Tangal had taken over the posted after the death of the previous Qazi, Tajul Ulema Assayyid Abdurrahman Al Bukhari Ullal Tangal.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm