ಬ್ರೇಕಿಂಗ್ ನ್ಯೂಸ್
14-07-24 10:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 14: ಸುರತ್ಕಲ್ ಬಳಿಯ ಎಸ್ಇಝೆಡ್ ವ್ಯಾಪ್ತಿಯಲ್ಲಿ ಮೀನು ಆಹಾರ ಉತ್ಪನ್ನ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ.ಗಳ ನಷ್ಟ ಉಂಟಾಗಿದೆ.
ಜೋಕಟ್ಟೆ ಬಳಿಯ ಅಥೆಂಟಿಕ್ ಓಷನ್ ಟ್ರೆಷರ್ ಎಂಬ ಮೀನು ಉತ್ಪನ್ನ ಘಟಕದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ. ಸುಮಾರು 10 ಕೋಟಿ ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗೆ ತುತ್ತಾಗಿದೆ ಎನ್ನಲಾಗಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಭಾನುವಾರ ರಜೆ ಕೊಡಲಾಗಿತ್ತು. ಹೀಗಾಗಿ ನೌಕರರು ಯಾರೂ ಇರಲಿಲ್ಲ ಎನ್ನಲಾಗಿದೆ. ಹಾಗಾಗಿ ಪ್ರಾಣ ಹಾನಿ ಸಂಭವಿಸಿಲ್ಲ.




ಅಥೆಂಟಿಕ್ ಓಷನ್ ಟ್ರೆಷರ್ ಕಂಪೆನಿಯು ಮೀನುಗಳನ್ನು ಸ್ವಚ್ಛಗೊಳಿಸಿ ಮಾಂಸದ ರೂಪಕ್ಕೆ ತಂದು ಅದನ್ನು 10 ಕೆ.ಜಿ. ಪ್ಯಾಕೆಟ್ ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿಯಾಗಿದೆ. ಕಂಪೆನಿಯ ಕೋಲ್ಡ್ ಸ್ಟೋರ್ ಸೆಕ್ಷನ್ ಮತ್ತು ಕಟ್ಟಿಂಗ್ ಸೆಕ್ಷನ್ ಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮತ್ಸ್ಯ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಬಳಿಕ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಹೊರ ಭಾಗದಲ್ಲಿ ಮಳೆಯ ನಡುವೆಯೂ ಬಾನೆತ್ತರಕ್ಕೆ ಹಾರುತ್ತಿದ್ದ ಬೆಂಕಿ ಮತ್ತು ಹೊಗೆ ಸ್ಥಳೀಯರನ್ನು ಅಚ್ಚರಿಗೆ ನೂಕಿತ್ತು.
SEZ massive fire erupts, fish factory catches fire in Mangalore. Fire personals had come in large number to off the fire
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am