ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm