ಬ್ರೇಕಿಂಗ್ ನ್ಯೂಸ್
18-07-24 10:22 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗ ಹೊರತುಪಡಿಸಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಜುಲೈ 19ರಂದು ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಜುಲೈ 18ರ ಗುರುವಾರವೂ ಮಂಗಳೂರು, ಮೂಲ್ಕಿ- ಮೂಡುಬಿದ್ರೆ, ಉಳ್ಳಾಲ ಹೊರತುಪಡಿಸಿ ಶಾಲೆ, ಕಾಲೇಜಿಗೆ ರಜೆ ನೀಡಿ ಆದೇಶ ಮಾಡಲಾಗಿತ್ತು. ಅದೇ ರೀತಿಯ ಆದೇಶವನ್ನು ಜುಲೈ 19ರಂದೂ ಹೊರಡಿಸಲಾಗಿದೆ. ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶಗಳಾದ ಬೆಳ್ತಂಗಡಿ, ನಾರಾವಿ, ಪುತ್ತೂರು ತಾಲೂಕಿನ ಕೆಲವು ಕಡೆಗಳಲ್ಲಿ ಗುರುವಾರವೂ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಮಳೆ ಕಡಿಮೆಯಿತ್ತು. ಇಡೀ ದಿನ ಕಪ್ಪಗಿನ ಮೋಡ ಕವಿದ ವಾತಾವರಣ ಮತ್ತು ಆಗಿಂದಾಗ್ಗೆ ಜಿಟಿ ಜಿಟಿ ಮಳೆಯಾಗಿತ್ತು. ಮಂಗಳೂರು, ಮೂಡುಬಿದ್ರೆಯಲ್ಲಿ ಶಾಲೆಗಳೂ ತೆರೆದಿದ್ದವು.
ಉಡುಪಿ ಜಿಲ್ಲೆಯಾದ್ಯಂತ ಜುಲೈ 19ರಂದು ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ, ಹಾಸನ, ಕೊಡಗಿನಲ್ಲೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಭಾರೀ ಮಳೆ ಇದ್ದುದರಿಂದ ಶಾಲೆ, ಕಾಲೇಜುಗಳಿಗೆ ರಜೆ ಇತ್ತು. ಜುಲೈ 19ರಂದು ರಜೆ ನೀಡಿರುವ ಮಾಹಿತಿ ಇನ್ನೂ ಬಂದಿಲ್ಲ.
ತುಂಬಿ ಹರಿದ ನೇತ್ರಾವತಿ, ಫಲ್ಗುಣಿ
ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ತೀವ್ರಗೊಂಡಿದ್ದು, ಪಶ್ಚಿಮದತ್ತ ಹರಿಯುವ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ನಿಂತಿದೆ. ನೇತ್ರಾವತಿ ನದಿಯಲ್ಲೂ ನೀರು ತುಂಬಿಕೊಂಡಿದ್ದು, ಬಂಟ್ವಾಳ ತಾಲೂಕಿನ ನಂದಾವರ, ಆಲಡ್ಕ, ಗೂಡಿನಬಳಿ ಏರಿಯಾದಲ್ಲಿ ಪ್ರತಿ ವರ್ಷದಂತೆ ನೆರೆ ಆವರಿಸಿದೆ. ಈ ಭಾಗದಲ್ಲಿ ಎಂಟು ಮನೆಗಳ ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರಗೊಂಡಿದ್ದಾರೆ. ಫಲ್ಗುಣಿ ನದಿಯಲ್ಲೂ ನೆರೆ ಕಾಣಿಸಿಕೊಂಡಿದ್ದು, ಅದ್ಯಪಾಡಿ ಆಸುಪಾಸಿನಲ್ಲಿ ನೆರೆ ನೀರು ಮನೆಗಳಿಗೆ ಮತ್ತು ಕೃಷಿ ತೋಟಕ್ಕೆ ನುಗ್ಗಿದೆ.
Heavy rains, landslide, Schools of Five taluks of Dakshina Kannada Mangalore declared. holiday for Udupi Hassan and Kodagu schools also have been issued holiday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm