ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm