ಬ್ರೇಕಿಂಗ್ ನ್ಯೂಸ್
19-07-24 08:56 pm Mangalore Correspondent ಕರಾವಳಿ
ಬೆಂಗಳೂರು, ಜುಲೈ.19: ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಹೆದ್ದಾರಿಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಜಿಲ್ಲಾಡಳಿತಗಳ ನಡುವೆ ಸಮನ್ವಯತೆ ಕೊರತೆ ಇರುವುದು ಕಂಡುಬರುತ್ತಿದೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಕಳೆದ ರಾತ್ರಿ ಮಡಿಕೇರಿ ಘಾಟ್ ಬಂದ್ ಮಾಡಿದ್ದರಿಂದ ನೂರಾರು ಜನರು ರಸ್ತೆ ಮಧ್ಯೆ ಅತಂತ್ರರಾಗಿದ್ದರು. ಇದು ಉಭಯ ಜಿಲ್ಲೆಗಳ ಜಿಲ್ಲಾಡಳಿತದ ಪೂರ್ವ ಸಿದ್ಧತೆಯ ಕೊರತೆಯಾಗಿದೆ. ಮಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವ ಸಿದ್ಧತೆಯೊಂದಿಗೆ ಘಾಟ್ ಬಂದ್ ಬಗ್ಗೆ ಚಿಂತಿಸಬೇಕು. ಒಂದೊಂದು ಜಿಲ್ಲೆಯವರು ತೀರ್ಮಾನ ತೆಗೆದುಕೊಂಡರೆ ಜನರಿಗೆ ಸಮಸ್ಯೆಯಾಗುತ್ತದೆ.
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ರಾತ್ರಿ 8 ರಿಂದ ಬೆಳಗ್ಗೆ 6ರ ತನಕ ರಸ್ತೆ ನಿರ್ಬಂಧ ಮಾಡಬೇಕು. ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೆಲ್ವಕುಮಾರ್ ಅವರಿಗೆ ಯು.ಟಿ.ಖಾದರ್ ಸೂಚಿಸಿದ್ದಾರೆ.
ದಿನನಿತ್ಯ ಸಹಸ್ರಾರು ಮಂದಿ ಮಂಗಳೂರು- ಬೆಂಗಳೂರು ಮಧ್ಯೆ ಪ್ರಯಾಣಿಸುತ್ತಾರೆ. ಪ್ರಯಾಣಿಕರು ಬಸ್, ಕಾರುಗಳನ್ನು ಆಶ್ರಯಿಸುತ್ತಾರೆ. ನಿತ್ಯ ಬಳಕೆಯ ವಸ್ತುಗಳ ಟ್ರಕ್ ಗಳೂ ಸಂಚರಿಸುತ್ತವೆ. ಆದರೆ ಈ ಪ್ರಮುಖ ಮೂರೂ ಘಾಟ್ ರಸ್ತೆಗಳನ್ನು ಬಂದ್ ಮಾಡಿದರೆ ಜನರು ಪರದಾಟ ನಡೆಸಬೇಕಾಗುತ್ತದೆ. ವಿಮಾನ ಸಂಚಾರ ಜನಸಾಮಾನ್ಯರ ಕೈಗೆಟಕದು. ರೈಲು ಸಂಚಾರ ತುರ್ತು ಸಂದರ್ಭಗಳಿಗೆ ಅನುಗುಣವಾಗಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಸಂಚಾರ ಅನಿವಾರ್ಯವಾಗಿರುತ್ತದೆ.
ಮಡಿಕೇರಿ ಘಾಟ್ ನಲ್ಲಿ ನಿನ್ನೆ ಆದಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ಆಸುಪಾಸಿನ ಜಿಲ್ಲೆಗಳ ನಾಲ್ಕೂ ಜಿಲ್ಲಾಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
Mangalore Bangalore shiradhi ghat closed, speaker U T Khader slams administration over planning.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm