ಬ್ರೇಕಿಂಗ್ ನ್ಯೂಸ್
22-07-24 05:30 pm Mangalore Correspondent ಕರಾವಳಿ
ಮಂಗಳೂರು, ಜುಲೈ.22: ಸರಕಾರಿ ಶಾಲೆಗಳ ಆವರಣದಲ್ಲಿ ಅಥವಾ ಶಾಲಾ ಮೈದಾನದಲ್ಲಿ ಗಣೇಶೋತ್ಸವ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಸುತ್ತೋಲೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ತುಷ್ಟೀಕರಣ ನೀತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧ ಎದುರಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶನ ವಿಗ್ರಹ ಮುಂದಿಟ್ಟು ಒಂದು ಗಂಟೆ ಕಾಲ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಕಾಂಗ್ರೆಸಿನಲ್ಲಿರುವ ಹಿಂದುಗಳು ಕೂಡ ಶಾಲೆಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಸುತ್ತಿದ್ದರು. ಶಾಲಾ ಮೈದಾನದಲ್ಲಿ ಎಲ್ಲ ಮಕ್ಕಳೂ ಜೊತೆಯಾಗಿ ಉತ್ಸವದಲ್ಲಿ ಕಳೆಯುತ್ತಿದ್ದರು. ಆದರೆ, ಕಾಂಗ್ರೆಸಿನ ಹಿಂದುಗಳು ಸರಕಾರದ ನೀತಿಯನ್ನು ಖಂಡಿಸಲಾಗದ ಸ್ಥಿತಿಯಲ್ಲಿದ್ದಾರೆ. ಹಿಂದುಗಳು ಜಾಗೃತರಾಗಬಾರದು, ಜೊತೆಗೂಡಬಾರದು ಎನ್ನುವ ಹುನ್ನಾರದಿಂದ ಈ ರೀತಿಯ ಕೆಲಸ ಮಾಡಿದ್ದಾರೆ.


ಸ್ವಾತಂತ್ರ್ಯ ಕಾಲದಲ್ಲಿ ಜನರನ್ನು ಒಗ್ಗೂಡಿಸುವುದಕ್ಕಾಗಿ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಣೆಗೆ ತಂದಿದ್ದರು. ಪ್ರತಿ ವರ್ಷ ಕರಾವಳಿ ಸೇರಿದಂತೆ ನಾಡಿನೆಲ್ಲೆಡೆ ಗಣೇಶೋತ್ಸವ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹಳಷ್ಟು ಕಡೆ ಶಾಲಾ ಮೈದಾನದಲ್ಲಿ ಹಬ್ಬ ನಡೆಸಲಾಗುತ್ತದೆ. ಆದರೆ, ಈ ಬಾರಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಪತ್ರ ಬರೆದು ಶಿಕ್ಷಣೇತರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚಿಸಿದ್ದಾರೆ. ಆಮೂಲಕ ಹಿಂದುಗಳ ಹಬ್ಬ ಗಣೇಶೋತ್ಸವ ಇನ್ನಿತರ ಉತ್ಸವಗಳಿಗೆ ಆಸ್ಪದ ಸಿಗದಂತೆ ಮಾಡಿದ್ದಾರೆ. ಇದರ ಹಿಂದೆ ಸರ್ಕಾರದ ಹಿಂದು ವಿರೋಧಿ ನೀತಿ ಇದೆಯೆಂದು ಸತೀಶ್ ಕುಂಪಲ ಆರೋಪಿಸಿದರು.
ಪ್ರತಿಭಟನೆಯಲ್ಲಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮೇಯರ್ ಸುಧೀರ್ ಶೆಟ್ಟಿ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಮಾತನಾಡಿದರು. ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ರವಿಶಂಕರ ಮಿಜಾರ್, ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಪ್ರಮುಖರು ಮತ್ತಿತರರಿದ್ದರು.
Denial of Ganeshotsava in school grounds by Congress government, BJP protest by Satish Kumpala in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am