ಬ್ರೇಕಿಂಗ್ ನ್ಯೂಸ್
24-07-24 10:58 pm Udupi Correspondent ಕರಾವಳಿ
ಉಡುಪಿ, ಜುಲೈ 24: ಬಾರ್ಕೂರು- ಉಡುಪಿ ನಡುವಿನ ಹಳಿ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದಿದ್ದು, ಲೊಕೊ ಪೈಲಟ್ ಹಾಗೂ ಸಹಾಯಕ ಲೊಕೊ ಪೈಲಟ್ ತೋರಿದ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.
ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಬಾರ್ಕೂರು - ಉಡುಪಿ ನಡುವೆ ಕಿ.ಮೀ ಸಂಖ್ಯೆ 686/32ರ ಬಳಿ ಸಾಗುತ್ತಿದ್ದಾಗ ಹಳಿ ಮೇಲೆ ಮರ ಬಿದ್ದಿರುವುದನ್ನು ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ಪೈಲಟ್ ಮಂಜುನಾಥ ನಾಯ್ಕ್ ಗಮನಿಸಿದ್ದರು. ತಕ್ಷಣ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದ್ದರು. ರೈಲ್ವೆ ಸಿಬ್ಬಂದಿಯ ತಂಡವು ಮರವನ್ನು ತೆರವುಗೊಳಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿತು.

ಸಮಯಪ್ರಜ್ಞೆ ತೋರಿ ಅಪಘಾತ ತಪ್ಪಿಸಲು ಕಾರಣರಾದ ಲೊಕೊ ಪೈಲಟ್ ಪುರುಷೋತ್ತಮ ಹಾಗೂ ಸಹಾಯಕ ಲೊಕೊ ಪೈಲಟ್ ಮಂಜುನಾಥ ನಾಯ್ಕ್ ಅವರಿಗೆ ಕೊಂಕಣ ರೈಲ್ವೆ ನಿಗಮ ನಿಯಮಿತದ ಮುಖ್ಯ ಮಹಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಝಾ ಅವರು ತಲಾ 15 ಸಾವಿರ ರೂ. ನಗದು ಬಹುಮಾನವನ್ನ ಘೋಷಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ವ್ಯವಸ್ಥಾಪಕಿ ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.
ನಿಗಮದ ಹಿರಿಯ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ದಿಲೀಪ್ ಭಟ್, ಹಾಗೂ ಮುಖ್ಯ ಲೊಕೊ ಇನ್ಸ್ಪೆಕ್ಟರ್ ಬಿನು ಕೆ. ಅವರು ಪುರುಷೋತ್ತಮ ಹಾಗೂ ಮಂಜುನಾಥ ನಾಯ್ಕ್ ಅವರಿಗೆ ನಗದು ಬಹುಮಾನವನ್ನು ಸುರತ್ಕಲ್ ರೈಲು ನಿಲ್ದಾಣದಲ್ಲಿ ಹಸ್ತಾಂತರಿಸಿದರು
Konkan Railway Corporation Ltd. felicitated loco pilots of Mumbai LTT-Mangaluru Central Matsyagandha Express for their alertness in halting the train upon noticing a fallen tree on the track between Barkur and Udupi on Wednesday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm