ಬ್ರೇಕಿಂಗ್ ನ್ಯೂಸ್
27-07-24 10:09 pm Mangalore Correspondent ಕರಾವಳಿ
ಮಂಗಳೂರು, ಜು.27: ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಿದ್ದು, ಪತ್ನಿ, ಮಕ್ಕಳೊಂದಿಗೆ ಕೋಲ ವೀಕ್ಷಿಸಿದರು.
ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು. ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಅವರು ಕುಲಕರ್ಣಿ ಕುಟುಂಬಕ್ಕೆ ಸಾಥ್ ನೀಡಿ ಜತೆಯಲ್ಲೇ ಕೋಲ ವೀಕ್ಷಿಸಿದರು.




ವಿಧಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು.
ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಶನಿವಾರ ಸಂಜೆ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.
Dharwad Vinay Kulkarni performs kola along with family in Mangalore. MLA speaker UT Khader brother Iftikar alo and many others joined with Kulkarni to perform kola at Thokottu in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm