ಬ್ರೇಕಿಂಗ್ ನ್ಯೂಸ್
29-07-24 01:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ಕೇರಳದಲ್ಲಿ ನಿಫಾ ವೈರಸ್ ಸೋಂಕಿಗೆ ತುತ್ತಾದ ರೋಗಿಗೆ ಆರೈಕೆ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕು ತಗಲಿ ಕೋಮಾ ಸ್ಥಿತಿಗೆ ತಲುಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್, ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲಿರುವಾಗಲೇ 2023 ಸೆಪ್ಟೆಂಬರ್ ತಿಂಗಳಲ್ಲಿ ಇವರು ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದರು ಎನ್ನಲಾಗಿದೆ. ಆಬಳಿಕ ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿತ್ತು.
ಡಿಸೆಂಬರ್ ತಿಂಗಳಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ನಿಫಾ ಸೋಂಕಿನಿಂದಾಗಿಯೇ ಮಿದುಳಿನ ಸ್ಟ್ರೋಕ್ ಆಗಿರುವುದು ತಿಳಿದುಬಂದಿದ್ದು ಕೆಲವು ದಿನಗಳಲ್ಲೇ ಕೋಮಾ ಸ್ಥಿತಿಗೆ ಜಾರಿದ್ದರು. ಆನಂತರ ಅದೇ ಆಸ್ಪತ್ರೆಯ ಆಡಳಿತ ಮಂಡಳಿ ವತಿಯಿಂದಲೇ ಚಿಕಿತ್ಸೆ ನೀಡಿದ್ದರೂ, ಯಾವುದೇ ಫಲ ಕಂಡಿಲ್ಲ. ಆಡಳಿತ ಮಂಡಳಿ ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.
ಹೀಗಾಗಿ ಉನ್ನತ ಮಟ್ಟದ ಆಸ್ಪತ್ರೆಗೆ ದಾಖಲಿಸಿ ಮಗನಿಗೆ ಚಿಕಿತ್ಸೆ ನೀಡುವಂತೆ ಕುಟುಂಬಸ್ಥರು ಕೇರಳ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಒಂದು ವರ್ಷದ ಹಿಂದೆ ಮಾರಣಾಂತಿಕ ಎನ್ನಲಾದ ನಿಫಾ ಸೋಂಕು ಕೇರಳದಲ್ಲಿ ಒಂದಿಬ್ಬರಿಗೆ ಕಂಡುಬಂದಿತ್ತು. ಆನಂತರ ಸೋಂಕಿಗೆ ಒಳಗಾದವರು ಚಿಕಿತ್ಸೆ ಪಡೆದು ಚೇತರಿಸಿದ್ದರು.
A man from Dakshina Kannada district, who was taking care of a patient infected with Nipah virus in Kerala, has been infected with Nipah virus and has gone into a coma.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm