ಬ್ರೇಕಿಂಗ್ ನ್ಯೂಸ್
29-07-24 02:49 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 29: ಮನೆಯ ಬಾತ್ ರೂಮಿನಲ್ಲಿ ಸ್ನಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿಯೊಬ್ಬ ಗ್ಯಾಸ್ ಗೀಸರ್ ಸೋರಿಕೆಯಾಗಿ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನಲ್ಲಿ ನಡೆದಿದೆ.
ಕೋಟೆಬಾಗಿಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು ಮೊಹಮ್ಮದ್ ಶಾರಿಕ್ (18) ಮೃತ ವಿದ್ಯಾರ್ಥಿ. ಪಿಯುಸಿ ಮುಗಿಸಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬಿಕಾಂ ಪದವಿಗೆ ಸೇರಿದ್ದ. ಭಾನುವಾರ ರಾತ್ರಿ ಪಕ್ಕದ ಮನೆಯಲ್ಲಿ ಏನೋ ಕೆಲಸ ಇದ್ದುದರಿಂದ ತಡವಾಗಿ ಮನೆಗೆ ಬಂದಿದ್ದು ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದ. ಆನಂತರ, ಸ್ವಲ್ಪ ಹೊತ್ತಿನ ಬಳಿಕ ಆತನ ಅಣ್ಣ ಬಂದಿದ್ದು ತಮ್ಮ ಎಲ್ಲಿದ್ದಾನೆಂದು ತಾಯಿ ಬಳಿ ಕೇಳಿದ್ದ.
ಆಗ ಸ್ನಾನಕ್ಕೆ ಹೋಗಿದ್ದಾಗಿ ತಾಯಿ ಹೇಳಿದ್ದರು. ತುಂಬ ಹೊತ್ತಾದರೂ ತಮ್ಮ ಬಾರದ ಕಾರಣ ಬಾಗಿಲು ಬಡಿದಾಗ ಒಳಗಿನಿಂದ ಚಿಲಕ ಹಾಕಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಶಾರೀಕ್ ನೆಲದಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿತ್ತು. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆಯಾಗಿ ಶಾರಿಕ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೂಡಲೇ ಮನೆಯವರು ಯುವಕನನ್ನು ಆಳ್ವಾಸ್ ಆಸ್ಪತ್ರೆಗೆ ಕರೆತಂದಿದ್ದರು. ಅಷ್ಟರಲ್ಲಿ ಶಾರಿಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇವರ ತಂದೆ ತೀರಿಕೊಂಡಿದ್ದು ತಾಯಿಗೆ ಇಬ್ಬರು ಮಕ್ಕಳು ಮಾತ್ರ ಇದ್ದರು.
ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪೋಸ್ಟ್ ಮಾರ್ಟಂ ಬಳಿಕ ನೈಜ ಕಾರಣ ಗೊತ್ತಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Mangalore Moodbidri 18 year old dies after gas leakage from geyser. The deceased has been identified as Mohammed Sharik.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm