ಬ್ರೇಕಿಂಗ್ ನ್ಯೂಸ್
29-07-24 10:08 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಮಣ್ಣಗುಡ್ಡ, ಸೆಂಟ್ರಲ್ ಮಾರುಕಟ್ಟೆ, ಏರ್ಪೋರ್ಟ್ ರಸ್ತೆಯಲ್ಲಿ ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಗೂಡಂಗಡಿಗಳನ್ನು ತೆರವುಗೊಳಿಸಲು ಮಹಾನಗರ ಪಾಲಿಕೆಯಿಂದ ಬುಲ್ಡೋಜರ್ ನುಗ್ಗಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಕ್ರಿಮಿನಲ್ ಹಿನ್ನೆಲೆಯ, ಭೂ ಅತಿಕ್ರಮಣದಾರರ ವಿರುದ್ಧ ಜೆಸಿಬಿ ನುಗ್ಗಿಸಿದ ರೀತಿ ಮಂಗಳೂರಿನಲ್ಲಿ ಬಿಜೆಪಿ ಆಡಳಿತ ಬಡ ಬೀದಿ ವ್ಯಾಪಾರಿಗಳ ಮೇಲೆ ಜೆಸಿಬಿಯಲ್ಲಿ ಸವಾರಿ ಮಾಡಿದೆ.
ಸೋಮವಾರ ಬೆಳಗ್ಗೆ ಗಾಂಧಿನಗರದ ಮಂಗಳಾ ಸ್ಟೇಡಿಯಂ ಎದುರಲ್ಲಿರುವ ಗೂಡಂಗಡಿಗಳನ್ನು ತೆರವು ಮಾಡಲು ಯತ್ನಿಸಿದ್ದಾರೆ. ಈ ವೇಳೆ, ವ್ಯಾಪಾರಿಗಳು ಅಡ್ಡ ಬಂದಿದ್ದು, ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿಯಿಂದ ಗೂಡಂಗಡಿಗಳನ್ನು ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಜೋರು ಗಲಾಟೆ ಮಾಡಿದ್ದು ಪೊಲೀಸರು ತಡೆದ ವ್ಯಾಪಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿಕೆಯ ಅಧಿಕಾರಿಗಳು ಜೆಸಿಬಿಯಿಂದ ಗೂಡಂಗಡಿಗಳನ್ನು ಒಡೆದು ಹಾಕಿಸಿ, ಟಿಪ್ಪರ್ ಲಾರಿಗಳಿಗೆ ತುಂಬಿಸಿದ್ದಾರೆ.




ಆನಂತರ, ಸೆಂಟ್ರಲ್ ಮಾರುಕಟ್ಟೆ ಆವರಣದಲ್ಲಿಯೂ ತಳ್ಳುಗಾಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವರನ್ನು ಎಬ್ಬಿಸಿ, ಗಾಡಿಗಳನ್ನು ಪುಡಿಗಟ್ಟಿದ್ದಾರೆ. ಅದೇ ರೀತಿಯಲ್ಲಿ ಏರ್ಪೋರ್ ರಸ್ತೆಯ ಯೆಯ್ಯಾಡಿ ಪರಿಸರದಲ್ಲಿಯೂ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ರಸ್ತೆ ಬದಿ ಗೂಡಂಗಡಿ ಇಟ್ಟು ಆಮ್ಲೆಟ್, ಚಹಾ ತಿಂಡಿಗಳನ್ನು ಮಾರುತ್ತಿದ್ದ ಬಡ ವ್ಯಾಪಾರಿಗಳ ಬದುಕಿನ ಮೇಲೆ ಜೆಸಿಬಿ ಸವಾರಿ ಮಾಡಿದೆ. ಕೆಲವೊಂದು ಖಾಲಿ ಅಂಗಡಿಗಳನ್ನೂ ಪುಡಿ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಜಾಲತಾಣದಲ್ಲಿ ಬಿಜೆಪಿ ಆಡಳಿತದ ಜೆಸಿಬಿ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.




ಈ ಬಗ್ಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಮೊನ್ನೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವರು ಬೀದಿ ವ್ಯಾಪಾರಿಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ದೂರು ಹೇಳಿಕೊಂಡಿದ್ದರು. ಈ ಬಗ್ಗೆ ಸೋಮವಾರದಿಂದ ಕಾರ್ಯಾಚರಣೆ ಮಾಡಿಸುತ್ತೇನೆ ಎಂದು ಹೇಳಿದ್ದೆ. ಆನಂತರ, ಮಂಗಳಾ ಸ್ಟೇಡಿಯಂ ಬಳಿಯೂ ಕ್ರೀಡಾಪಟುಗಳು ಬರುವ ದಾರಿಯಲ್ಲೇ ಗೂಡಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಆಕ್ಷೇಪಿಸಿ ದೂರುಗಳು ಬಂದಿದ್ದವು. ಇವತ್ತು ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಮಣ್ಣಗುಡ್ಡದಲ್ಲಿ ಅಡ್ಡಿ ಪಡಿಸಿದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ತೆರವು ಕಾರ್ಯಾಚರಣೆಗೂ ಮುನ್ನ ಪಾಲಿಕೆಯಿಂದ ನೋಟೀಸ್ ಅಥವಾ ಸೂಚನೆ ಕೊಡಬೇಕಿತ್ತು. ಯಾವುದೇ ಸೂಚನೆ ಕೊಡದೆಯೇ ನೇರವಾಗಿ ಕಾರ್ಯಾಚರಣೆ ನಡೆಸಿದ್ದು, ಬಡವರ ಅನ್ನದ ಬಟ್ಟಲಿಗೆ ಕೊಳ್ಳಿ ಇಟ್ಟಿದ್ದಾರೆ ಎಂದು ವ್ಯಾಪಾರಿಗಳು ನೋವು ವ್ಯಕ್ತಪಡಿಸಿದ್ದಾರೆ.
Illegal petteytshops in Mangalore demolished by MCC, shop vendors taken intonl custody. Fight erupted between shop owners and mcc officals over destroying of petty shops using JCB.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm