ಬ್ರೇಕಿಂಗ್ ನ್ಯೂಸ್
30-07-24 08:36 pm Mangalore Correspondent ಕರಾವಳಿ
ಮಂಗಳೂರು, ಜುಲೈ.30: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಕ್ಕಿ ಹರಿದಿವೆ. ಉಪ್ಪಿನಂಗಡಿಯಲ್ಲಿ ಇವರೆಡು ನದಿಗಳಲ್ಲಿ ಭಾರೀ ನೀರು ಬಂದಿದ್ದರಿಂದ ಅಪಾಯದ ಮಟ್ಟ ಮೀರಿ ಹರಿದಿದೆ. 29 ಮೀಟರ್ ಎತ್ತರಕ್ಕೂ ಹೆಚ್ಚಿನ ಮಟ್ಟದಲ್ಲಿ ನೀರು ಬಂದಿದ್ದರಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗಿದೆ. ಇದೇ ವೇಳೆ, ಜುಲೈ 31ರ ಮಂಗಳವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ನೀಡಿದ್ದಾರೆ.
ಉಪ್ಪಿನಂಗಡಿಯಲ್ಲಿ ಎರಡು ನದಿಗಳು ಸಂಗಮಗೊಳ್ಳುವುದರಿಂದ ಅತಿ ಹೆಚ್ಚು ನೀರು ಬಂದರೆ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗುತ್ತದೆ. ಅಷ್ಟರ ಮಟ್ಟಿಗೆ ನೀರು ಬಂದರೆ ಸಂಗಮ ಆಗುತ್ತದೆ ಎನ್ನುವುದು ನಂಬಿಕೆ. ರಾತ್ರಿ ವೇಳೆ ಬಹುತೇಕ ಸಂಗಮದ ಕ್ಷಣ ಎದುರಾಗುವ ಸಾಧ್ಯತೆಯಿದೆ. ಸೋಮವಾರ ಸಂಜೆ ಪುತ್ತೂರು ಶಾಸಕ ಅಶೋಕ್ ರೈ ಉಪ್ಪಿನಂಗಡಿ ದೇವಸ್ಥಾನಕ್ಕೆ ಬಂದು ನದಿಗೆ ಬಾಗಿನ ಅರ್ಪಿಸಿದ್ದಾರೆ.


















ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಪಾಣೆಮಂಗಳೂರು ಸೇತುವೆಗೆ ಮುಟ್ಟುವಷ್ಟು ನದಿಯಲ್ಲಿ ನೀರು ಬಂದಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುವ ಮನಮೋಹಕ ದೃಶ್ಯ ವೈರಲ್ ಆಗಿದೆ. ಬಂಟ್ವಾಳ ಆಸುಪಾಸಿನ ನಂದಾವರ, ಆಲಡ್ಕ, ಅಜಿಲಮೊಗರು, ಗೂಡಿನಬಳಿ ಹೀಗೆ ನೇತ್ರಾವತಿ ನದಿಯ ಇಕ್ಕೆಲಗಳಲ್ಲಿ ನದಿ ನೀರು ಗ್ರಾಮಗಳಿಗೆ ನುಗ್ಗಿದೆ. ಇದರಿಂದಾಗಿ ತಗ್ಗು ಪ್ರದೇಶದ ನಿವಾಸಿಗಳು ಮನೆಯನ್ನು ಬಿಟ್ಟು ಸುರಕ್ಷಿತ ಸ್ಥಳಗಳತ್ತ ತೆರಳಿದ್ದಾರೆ. ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ವಿಕೋಪ ನಿರ್ವಹಣಾ ತಂಡದ ಸದಸ್ಯರು ಬೋಟ್ ಸಹಿತ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಆನಂತರ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಭಾರೀ ಮಳೆಯ ಕಾರಣದಿಂದ ಜಿಲ್ಲಾಡಳಿತದ ಅಧಿಕಾರಿಗಳನ್ನು ಸನ್ನದ್ಧ ಇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
Heavy rains in Mangalore, rivers flooded, bridges in danger, schools and colleges declared holiday due to red alert. The bathing platform in Kukke Subrahmanya was submerged as the Kumaradhara river was in spate following heavy rains in Western Ghat region. Pilgrims have been banned from getting down into the river for bathing and alternative arrangements have been made for the same.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm