ಬ್ರೇಕಿಂಗ್ ನ್ಯೂಸ್
31-07-24 02:40 pm Mangalore Correspondent ಕರಾವಳಿ
ಉಡುಪಿ, ಜುಲೈ 31: ಕರಾವಳಿಯ ಯಕ್ಷಗಾನ ರಂಗದಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸೇವೆ ನೀಡಿದ್ದ ಗುರುಪ್ರಸಾದ್ ನೀರ್ಜೆಡ್ಡು 26 ವರ್ಷಕ್ಕೆ ತಮ್ಮ ಜೀವನವನ್ನು ಅಂತ್ಯಗೊಳಿಸಿಕೊಂಡಿದ್ದಾರೆ.
ಗುರುಪ್ರಸಾದ್ ನೀರ್ಜೆಡ್ಡು ಅವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜುಲೈ 27ರಂದು ಇಲಿ ಪಾಷಾಣ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ನಿನ್ನೆ (ಜುಲೈ 30) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಗುರುಪ್ರಸಾದ್ ಯಕ್ಷಗಾನ ನೃತ್ಯಾಭ್ಯಾಸ ಮಾಡಿದರು. ಭವಿಷ್ಯದಲ್ಲಿ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಕುಂದಾಪುರ ತಾಲೂಕಿನ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು, ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದರು.
ಸ್ತ್ರೀವೇಷಧಾರಿಯಾಗಿ ತಮ್ಮ ಕುಣಿತ, ಮಾತು ಹಾಗೂ ಕಲೆಯಿಂದ ಅಪಾರ ಯಕ್ಷ ಅಭಿಮಾನಿಗಳನ್ನು ಹೊಂದಿದ್ದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣಾಗಿರುವು ಮಾತ್ರ ಶಾಕಿಂಗ್ ವಿಚಾರವಾಗಿದೆ. 12 ವರ್ಷ ಸ್ತ್ರೀ ವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು ಅವರು ತಾಯಿ, ತಮ್ಮ, ಸ್ನೇಹಿತರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಕ್ಷಗಾನದ ಅಭಿಮಾನಿಗಳು ಕೂಡ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
Udupi Yakshagana artiste Guruprasad Neerjeddu dies by suicide. The deceased, Guruprasad Neerjeddu (26), had donned the female roles in Mandarthi, Madamakki, Amriteshwari, Saligrama and Marankatte Melas (troupes) for about 12 years.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm