ಬ್ರೇಕಿಂಗ್ ನ್ಯೂಸ್
02-08-24 10:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಚಳವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಸರಕಾರ ವಾಲ್ಮೀಕಿ ನಿಗಮದಲ್ಲಿದ್ದ 187 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದು ಎಲ್ಲರಿಗೂ ತಿಳಿದಿದೆ. ಇದರ ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಸೈಟ್ ಗಳನ್ನು ಪಡೆದು ಮತ್ತೊಂದು ದೊಡ್ಡ ಹಗರಣ ಮಾಡಿದ್ದಾರೆ. ತನ್ನ ಪತ್ನಿಯ ಹೆಸರಲ್ಲೇ ಹಗರಣ ನಡೆಸಿದ್ದು, ಮುಖ್ಯಮಂತ್ರಿ ರಾಜಿನಾಮೆಗೆ ಆಗ್ರಹಿಸಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಪಾದಯಾತ್ರೆ ನಡೆಸಲಿದೆ. ಆಗಸ್ಟ್ 3ರಂದು ಬೆಂಗಳೂರಿನಿಂದ ಪಾದಯಾತ್ರೆ ಹೊರಟು 15ಕ್ಕೆ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದರು.

ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ಶಾಸಕರು, ಪ್ರಮುಖ ಪದಾಧಿಕಾರಿಗಳು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ಈಗಾಗಲೇ 200 ಮಂದಿಯಷ್ಟು ಕಾರ್ಯಕರ್ತರು ತೆರಳಿದ್ದು, ಅಲ್ಲಿನ ಸಿದ್ಧತೆಗೆ ಕೈಜೋಡಿಸಿದ್ದಾರೆ. ಆಗಸ್ಟ್ 7ರಂದು ದೊಡ್ಡ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ತೆರಳಲಿದ್ದು, ಅದಕ್ಕಾಗಿ ಬಸ್ಸಿನ ವ್ಯವಸ್ಥೆ ಮಾಡಿದ್ದೇವೆ. ಅಲ್ಲಿ ಹೋಗಿ ಉಳಿಯುವವರಿಗೆ ಪಕ್ಷದ ವತಿಯಿಂದ ವ್ಯವಸ್ಥೆ ಮಾಡಲಿದ್ದೇವೆ. ಅಂದು 2ರಿಂದ 3 ಸಾವಿರ ಕಾರ್ಯಕರ್ತರು ನಮ್ಮ ಜಿಲ್ಲೆಯಿಂದ ತೆರಳಲಿದ್ದಾರೆ. ಪಾದಯಾತ್ರೆ ಉದ್ದಕ್ಕೂ ಜಿಲ್ಲೆಯ ಕಾರ್ಯಕರ್ತರು ಜೊತೆಗಿರಲಿದ್ದಾರೆ ಎಂದರು.
ಜೆಡಿಎಸ್ ನಾಯಕರು ಅಪಸ್ವರ ತೆಗೆದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕುಮಾರಸ್ವಾಮಿ ಅವರ ಜೊತೆಗೆ ನಮ್ಮ ಕೇಂದ್ರ ನಾಯಕರು ಮಾತುಕತೆ ನಡೆಸಿದ್ದಾರೆ. ಪಾದಯಾತ್ರೆಯನ್ನು ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಜಂಟಿಯಾಗಿ ಉದ್ಘಾಟನೆ ನಡೆಸಲಿದ್ದಾರೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಜನಜಾಗೃತಿ ಮೂಡಿಸುವುದು ಪಾದಯಾತ್ರೆ ಉದ್ದೇಶ. ಇದಕ್ಕಾಗಿ ನಾವೆಲ್ಲ ಜೊತೆಯಾಗಿದ್ದೇವೆ ಎಂದರು. ಸುದ್ದಿಗೋಷ್ಟಿಯಲ್ಲಿ ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಜಯ ಪ್ರಭು ಇದ್ದರು.
5 thousand bjp members to join Mysuru chalo from Dakshina Kannada says Satish Kumpala in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm