ಬ್ರೇಕಿಂಗ್ ನ್ಯೂಸ್
02-08-24 11:16 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.
ಇದಕ್ಕೂ ಮುನ್ನ ಸಂಜೆ ವೇಳೆಗೆ ಮಳೆ ಪೀಡಿತ ಪ್ರದೇಶಗಳ ಭೇಟಿ ಬಳಿಕ ಸುದ್ದಿ ಮಾಧ್ಯಮಕ್ಕೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅದ್ಯಪಾಡಿಯಲ್ಲಿ ನೀರು ನಿಲ್ಲುತ್ತಿರುವುದಕ್ಕೆ ಚೆಕ್ ಡ್ಯಾಮ್ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ನಮಗೆ ಪರಿಹಾರ ಬೇಡ, ಶಾಶ್ವತ ಪರಿಹಾರ ಬೇಕು ಎಂದು ಹೇಳಿದ್ದಾರೆ. ಅವರಿಗೆ ಕೃಷಿ ನಷ್ಟ ಆಗಿರುವ ಬಗ್ಗೆ ಪರಿಹಾರ ಪಡೆಯುವಂತೆ ಮನವೊಲಿಸಿದ್ದೇನೆ. ಚೆಕ್ ಡ್ಯಾಮ್ ಸಮಸ್ಯೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧ್ಯಯನ ಸಮಿತಿ ನಡೆಸಲು ಸೂಚಿಸಿದ್ದೇನೆ. ಸಮಿತಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆತ್ತಿಕಲ್ ಗುಡ್ಡ ಕುಸಿತದ ಬಗ್ಗೆ ಪರಿಶೀಲನೆ ನಡೆಸಲು ಐಐಟಿ ತಜ್ಞರು ಶಿರೂರಿನಲ್ಲಿ ಅಧ್ಯಯನ ಮುಗಿಸಿ ಇಲ್ಲಿಗೆ ಬರಲಿದ್ದಾರೆ. ಹೆದ್ದಾರಿ ಅಲೈನ್ಮೆಂಟ್ ಬದಲಾವಣೆ ಮಾಡಿರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಆ ರೀತಿ ಗುಡ್ಡ ಕಡಿತ ಮಾಡುವಾಗ ಅಧಿಕಾರಿಗಳಿಗೆ ಗೊತ್ತಾಗಿಲ್ಲ ಎನ್ನುವುದು ವೈಫಲ್ಯ ಎನ್ನಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವಾಗ ಅವರಿಗೂ ಜವಾಬ್ದಾರಿ ಇದೆ. ಗುಡ್ಡವನ್ನು ಅಗೆದು ಅಪಾಯಕಾರಿ ರೀತಿ ಮಾಡಿಟ್ಟಿದ್ದಾರೆ. ಕುಸಿತ ತಡೆಯುವ ದೃಷ್ಟಿಯಿಂದ ಏನು ಕ್ರಮ ಆಗಬೇಕೋ ಅದನ್ನು ಮಾಡುತ್ತೇವೆ. ತಜ್ಞರ ವರದಿ ಆಧರಿಸಿ ಯಾರು ನಿರ್ಲಕ್ಷ್ಯ ವಹಿಸಿದ್ದಾರೆ ಎಲ್ಲವೂ ತಿಳಿಯಲಿದೆ. ಹೆದ್ದಾರಿಗೆ ಪರ್ಯಾಯ ವ್ಯವಸ್ಥೆ ಮಾಡೋಣ ಎಂದು ಹೇಳಿದರು.
Dinesh Gundu Rao orders to stop working of excavating ground due to rains in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm