ಬ್ರೇಕಿಂಗ್ ನ್ಯೂಸ್
03-08-24 01:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.3: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ನಿಗಮದ ಇಲಾಖೆಯಲ್ಲಿ ಹಗರಣ ಆಗಿದೆ, ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೂ ಪಾದಯಾತ್ರೆ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನಾ ಹೆಸರಲ್ಲಿ ನೂರಾರು ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ, ಬೊಮ್ಮಾಯಿ ಖುದ್ದು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವರ ಮನೆಗೆ ಯಾಕೆ ಬಿಜೆಪಿಗರು ಪಾದಯಾತ್ರೆ ಮಾಡುವುದಿಲ್ಲ? ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ಈ ಪಾದಯಾತ್ರೆ ಎಂದರು.
ವಾಲ್ಮೀಕಿ ಹಗರಣದಲ್ಲಿ ಬಂಧಿತರಾದವರಿಗೆ ಉದ್ದೇಶಪೂರ್ವಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳುವಂತೆ ಬೆದರಿಕೆ ಹಾಕಲಾಗುತ್ತಿದೆ. ರಾಜ್ಯದ ಜನರಲ್ಲಿ ಸರಕಾರ ಬೀಳುತ್ತದೆ ಎಂದು ಗುಲ್ಲೆಬ್ಬಿಸಿ ದಾರಿ ತಪ್ಪಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನೂ ಭ್ರಷ್ಟಾಚಾರಿ ಎಂದು ಬಿಂಬಿಸಲು ಹೊರಟಿದ್ದಾರೆ. ಇದಕ್ಕಾಗಿ ಪಾದಯಾತ್ರೆ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಕಾಲದ ಹಗರಣ ಬಗ್ಗೆ ತನಿಖೆ ನಡೆಸುತ್ತಿದ್ದು ಕೋಟ ಶ್ರೀನಿವಾಸ ಪೂಜಾರಿ ಸಹಿತ ಎಲ್ಲರನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಅಶ್ರಫ್ ಕೆ, ಪ್ರಕಾಶ್ ಸಾಲಿಯಾನ್, ವಿಕಾಸ್ ಶೆಟ್ಟಿ, ಅಪ್ಪಿ, ಸತೀಶ್ ಪೆಂಗಲ್, ಭಾಸ್ಕರ್ ರಾವ್, ಎಂ ಪಿ ಮನುರಾಜ್, ಇಮ್ರಾನ್ ಎ.ಆರ್, ಪ್ರೇಮ್ ಬಲ್ಲಾಳ್ ಬಾಗ್, ಕಿರಣ್ ಬುಡ್ಲೆಗುತ್ತು, ಮೀನಾ ಟೆಲಿಸ್, ಅಬ್ದುಲ್ ಸಲೀಂ ಮತ್ತಿತರರು ಉಪಸ್ಥಿತರಿದ್ದರು.
BJP should do padayatra to sudhakar, bommais house, Slams Ivan Dsouza in Mangalore. BJP state President BY Vijayendra and his family visited the Chamundeshwari temple in Mysore before embarking on the padayatra. Vijayendra emphasized that the opposition's struggle is focused on representing the people's voice and protecting their rights.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm