ಬ್ರೇಕಿಂಗ್ ನ್ಯೂಸ್
06-08-24 07:25 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.6: ದೇಶದ ಗಮನಸೆಳೆದು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮಂಗಳೂರಿನ ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣದಲ್ಲಿ ಹಿಂದು ಜಾಗರಣ ವೇದಿಕೆಯ ಸುಭಾಸ್ ಪಡೀಲ್ ಸೇರಿದಂತೆ ಎಲ್ಲ 39 ಆರೋಪಿಗಳನ್ನು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ವಿ ಕಾಂತರಾಜು 12 ವರ್ಷಗಳ ಬಳಿಕ ಮಹತ್ವದ ತೀರ್ಪು ನೀಡಿದ್ದಾರೆ.
2012ರ ಜುಲೈ 28ರಂದು ರಾತ್ರಿ ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ, ಯುವತಿಯರ ಮೇಲೆ ತಂಡ ದಾಳಿಗೈದು ಹಲ್ಲೆ ನಡೆಸಿತ್ತು. ಹೋಮ್ ಸ್ಟೇಯಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ದಾಳಿ ನಡೆಸಲಾಗಿತ್ತು. ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಪತ್ರಕರ್ತರು ಸೇರಿ 40ಕ್ಕೂ ಹೆಚ್ಚು ಮಂದಿ ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದರು.
ಘಟನೆ ಬಗ್ಗೆ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. 44 ಆರೋಪಿಗಳ ಪೈಕಿ ಮೂವರು ವಿಚಾರಣೆ ಸಂದರ್ಭದಲ್ಲೇ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಸೇರ್ಪಡೆಗೊಂಡಿದ್ದ ಪತ್ರಕರ್ತ ನವೀನ್ ಸೂರಿಂಜೆಯನ್ನು ನ್ಯಾಯಾಲಯ ವಿಚಾರಣೆ ನಡುವಲ್ಲೇ ಪ್ರಕರಣದಿಂದ ಕೈಬಿಟ್ಟಿತ್ತು. ಕಳೆದ ಬಾರಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವೀನ್ ಸೂರಿಂಜೆ ಮೇಲಿನ ಕೇಸನ್ನು ವಾಪಸ್ ಪಡೆಯಲಾಗಿತ್ತು.
ಐದು ಹುಡುಗಿಯರು ಸೇರಿದಂತೆ 12 ಮಂದಿಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದು ಭಾರೀ ಟೀಕೆಗೆ ಗುರಿಯಾಗಿತ್ತು. ಬಳಿಕ ಮಹಿಳಾ ಆಯೋಗ ತನಿಖೆ ನಡೆಸಿ ಪೊಲೀಸ್ ವೈಫಲ್ಯದ ಬಗ್ಗೆ ಗೃಹ ಸಚಿವರಿಗೆ ವರದಿ ನೀಡಿತ್ತು. 12 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೂಕ್ತ ಸಾಕ್ಷ್ಯಾಧಾರ ಕೊರತೆಯಿಂದಾಗಿ ಇತರೇ 39 ಆರೋಪಿಗಳನ್ನ ದೋಷಮುಕ್ತಗೊಳಿಸಿ ಮಂಗಳವಾರ ಜಿಲ್ಲಾ ಕೋರ್ಟ್ ತೀರ್ಪು ನೀಡಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿತ್ತು.
In a significant judgment, the Sixth Additional District and Sessions Court of Mangaluru has acquitted all the accused in the homestay illegal raid case of 2012.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm