ಬ್ರೇಕಿಂಗ್ ನ್ಯೂಸ್
07-08-24 11:08 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ರಾಜ್ಯದ 31 ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ ಮಳೆ ಪ್ರಮಾಣ 3400 ಮಿಮೀ ಗಡಿ ದಾಟಿದ್ದು, ಅತಿ ಹೆಚ್ಚು ಮಳೆ ಕಂಡ ಜಿಲ್ಲೆಯಾಗಿ ಈ ಸಲ ದಾಖಲೆ ಸೇರಿದೆ.
ಜುಲೈ ತಿಂಗಳ ವಾಡಿಕೆ ಮಳೆ 1448 ಮಿಮೀ ಆಗಿದ್ದರೆ, ಈ ಬಾರಿ 2049 ಮಿಮೀ ಮಳೆಯಾಗಿದೆ. ಇದು ಕಳೆದೊಂದು ದಶಕದಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಸಹಿತ ಮಲೆನಾಡು ಜಿಲ್ಲೆಗಳಿಗೆ ಹೋಲಿಸಿದರೆ ಕಳೆದೊಂದು ದಶಕದಿಂದ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿರುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಜೂನ್, ಜುಲೈ ತಿಂಗಳಲ್ಲಿ 3427 (ವಾಡಿಕೆ- 2766ಮಿಮೀ), ದಕ್ಷಿಣ ಕನ್ನಡ 2819 ಮಿಮೀ (2347), ಕೊಡಗು 1844 (1513 ಮಿಮೀ), ಶಿವಮೊಗ್ಗ 1686 (ವಾಡಿಕೆ 1356), ಉತ್ತರ ಕನ್ನಡ 2676 (1835) ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಶೇ. 20, ಕೊಡಗಿನಲ್ಲಿ ಶೇ.22, ಶಿವಮೊಗ್ಗದಲ್ಲಿ ಶೇ.24 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.46ಕ್ಕೂ ಹೆಚ್ಚು ಮಳೆ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್, ಜುಲೈ ನಲ್ಲಿ ರಾಜ್ಯದಲ್ಲೇ ಅತಿ ಕಡಿಮೆ(146 ಮಿಮೀ) ಮಳೆಯಾಗಿರುವ ವರದಿ ಇದೆ. ವಾಡಿಕೆಯ ಮಳೆಗೆ (119 ಮಿಮೀ) ಹೋಲಿಸಿದರೆ, ಹಿಂದಿಗಿಂತ ಈ ಬಾರಿ ಹೆಚ್ಚು ಬಿದ್ದಿದೆ. ರಾಯಚೂರು ಜಿಲ್ಲೆಯಲ್ಲಿ 189 ಮಿಮೀ ಮಳೆಯಾಗಿದ್ದು, ವಾಡಿಕೆಯಲ್ಲಿ ಶೇ.3 ಕೊರತೆಯಾಗಿದೆ. ಯಾದಗಿರಿ 219 ಮಿಮೀ ಮಳೆಯಾಗಿದ್ದು, ಶೇ.10ರಷ್ಟು ಕೊರತೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೂ ನೆರೆ ರಾಜ್ಯಗಳ ಅಣೆಕಟ್ಟಿನಿಂದ ನೀರು ಬಿಟ್ಟ ಕಾರಣ ಬಾಗಲಕೋಟ(218 ಮಿಮೀ), ರಾಯಚೂರು(189), ಬೆಳಗಾವಿ (588ಮಿಮೀ), ಯಾದಗಿರಿಯಲ್ಲಿ (219 ಮಿಮೀ) ನೆರೆ ಸಮಸ್ಯೆಯೂ ತಲೆದೋರಿತ್ತು.
Highest rain fall seen in Udupi with 3427 mm. Very heavy rainfall in some areas on the foothills of the Western Ghats in Udupi district triggered floods throwing life out of gear in the southern parts
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm