ಬ್ರೇಕಿಂಗ್ ನ್ಯೂಸ್
08-08-24 03:36 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಮಂಗಳೂರಿನಿಂದ ಕಟೀಲು - ಬಜ್ಪೆ ಸಂಪರ್ಕಿಸುವ ಮರವೂರು ಸೇತುವೆ ಅಪಾಯಕ್ಕೀಡಾಗಿದ್ದು ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಮಂಗಳೂರು ನಗರದಿಂದ ಬಜ್ಪೆ ಏರ್ಪೋರ್ಟ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು ಏಕಮುಖ ಸಂಚಾರಕ್ಕೆ ಅವಕಾಶ ಇದ್ದ ಸೇತುವೆಯಲ್ಲಿ ಸಂಪರ್ಕ ಕಡಿತ ಮಾಡಲಾಗಿದೆ. ಮರವೂರಿನಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ 1968ರಲ್ಲಿ ನಿರ್ಮಿಸಲಾಗಿದ್ದ ಹಳೆ ಸೇತುವೆ ಇದಾಗಿದ್ದು ವರ್ಷದ ಹಿಂದೆಯೂ ಇದೇ ರೀತಿ ಸಂಚಾರಕ್ಕೆ ತೊಡಕಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಬಿರುಕು ಬಿಟ್ಟಿದ್ದರಿಂದ ಸಂಚಾರ ಕಡಿತಗೊಳಿಸಿ ದುರಸ್ತಿಗೊಳಿಸಿದ ಬಳಿಕ ಮತ್ತೆ ಸಂಚಾರಕ್ಕೆ ಅನುವು ಮಾಡಲಾಗಿತ್ತು.
ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರವಾರದಲ್ಲಿ ಕಾಳಿ ನದಿ ಸೇತುವೆ ಕುಸಿದ ಬಳಿಕ ಹಳೆ ಸೇತುವೆಗಳ ಬಗ್ಗೆ ಜಿಡಬ್ಲ್ಯೂಡಿ ಇಲಾಖೆಯ ಅಧಿಕಾರಿಗಳು ನಿಗಾ ಇಟ್ಟಿದ್ದು ಅಪಾಯ ಹೆಚ್ಚಿರುವ ಸೇತುವೆಗಳನ್ನು ಗುರುತಿಸಿ ದುರಸ್ತಿಗೆ ಮುಂದಾಗಿದ್ದಾರೆ.
Mangalore airport raod old maravoor bridge has been ordered to close by the DC after one of the pillars of the bridge is in danger
28-03-25 12:19 pm
Bangalore Correspondent
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:52 am
Mangalore Correspondent
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm