ಬ್ರೇಕಿಂಗ್ ನ್ಯೂಸ್
10-08-24 12:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿಯಾಗಲ್ಲ ಎಂಬುದು ಬಹಳಷ್ಟು ಬಾರಿ ಸಾಬೀತಾಗಿದೆ. ಇದಕ್ಕೊಂದು ಸೇರ್ಪಡೆ ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆ. ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಲ್ಲಿ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಶುಕ್ರವಾರ ನೆರವೇರಿದೆ.




ಮಂಗಳೂರಿನ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. 2019ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. 2023ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
In a heartwarming celebration of love transcending borders, a Mangalurean man and a Brazilian woman were married on Thursday, August 8, at T V Raman Pai Hall. This union not only marks the culmination of a five-year courtship but also beautifully blends two rich and diverse cultures, creating a joyous occasion that has touched many hearts.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am