ಬ್ರೇಕಿಂಗ್ ನ್ಯೂಸ್
11-08-24 04:42 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುಎಇ ರಾಜಧಾನಿ ಅಬುಧಾಬಿಗೆ ಇಂಡಿಗೋ ಸಂಸ್ಥೆ ಪ್ರತಿದಿನ ನೇರ ವಿಮಾನ ಹಾರಾಟ ಆರಂಭಿಸಿದೆ.
ಆಗಸ್ಟ್ 9 ರಿಂದ ಇಂಡಿಗೋದಿಂದ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದುಬೈ ನಂತರ ಮಂಗಳೂರಿನಿಂದ ಪ್ರತಿದಿನ ವಿಮಾನ ಸಂಚಾರದ ಎರಡನೇ ಸಾಗರೋತ್ತರ ತಾಣ ಇದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಸ್ತುತ ಎಂಟು ಮಧ್ಯಪ್ರಾಚ್ಯ ಸ್ಥಳಗಳಿಗೆ ಮತ್ತು ಆರು ದೇಶೀಯ ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಅಬುಧಾಬಿ ನೇರ ವಿಮಾನದ ಉದ್ಘಾಟನಾ ಯಾನದಲ್ಲಿ ತನ್ನ ತಾಯಿಯೊಂದಿಗೆ ಚೆಕ್-ಇನ್ ಮಾಡಿದ ಮೊದಲ ಫ್ಲೈಯರ್ ನಂದಿಕಾ ಉಡಾವಣಾ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದರು. ಮಂಗಳೂರು ವಿಮಾನ ನಿಲ್ದಾಣ ಮತ್ತು ಏರ್ಲೈನ್ಸ್ ತಂಡದೊಂದಿಗೆ ಸಾಂಪ್ರದಾಯಿಕ ದೀಪವನ್ನು ಬೆಳಗಿಸುವ ಅವಕಾಶವನ್ನು ನಂದಿಕಾ ಪಡೆದರು. ಮೊದಲ ಬೋರ್ಡಿಂಗ್ ಪಾಸ್ ಮತ್ತು ಏರ್ಲೈನ್ ಬ್ಯಾಗ್ ಅನ್ನು ಆಕೆ ಪಡೆದರು.
ಬಳಿಕ ಕೇಕ್ ಕತ್ತರಿಸುವ ಕಾರ್ಯ ಮಕಕ್ರಮದಲ್ಲೂ ನಂದಿಕಾಗೆ ಅವಕಾಶ ದೊರೆಯಿತು. ಕ್ಯಾಪ್ಟನ್ ವಿಕರ್ ಯಾಸೀನ್ ನೇತೃತ್ವದ ವಿಮಾನ ಇತರ ಪ್ರಯಾಣಿಕರೊಂದಿಗೆ ಅಬುಧಾಬಿಗೆ ರಾತ್ರಿ 9.40 ಗಂಟೆಗೆ ಹೊರಟಿತು. ಇದರೊಂದಿಗೆ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಬುಧಾಬಿಗೆ ಎರಡು ದೈನಂದಿನ ವಿಮಾನಗಳನ್ನು ಹೊಂದಿದೆ. ಏರ್ ಇಂಡಿಯಾ ಸಂಸ್ಥೆಯಿಂದ ಈಗಾಗಲೇ ಮಂಗಳೂರಿನಿಂದ ಗಲ್ಫ್ ರಾಷ್ಟ್ರಕ್ಕೆ ವಿಮಾನ ಸಂಚಾರ ಇದೆ.
IndiGo has started daily direct flights from Mangalore International Airport to Abu Dhabi, the capital of UAE.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm