ಬ್ರೇಕಿಂಗ್ ನ್ಯೂಸ್
14-08-24 02:24 pm Mangalore Correspondent ಕರಾವಳಿ
ಉಳ್ಳಾಲ, ಆ.14: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಸಾವನ್ನಪ್ಪಿದ ರಿಕ್ಷಾ ಚಾಲಕ. ಮಜೀದ್ ನಿನ್ನೆ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕ ಮಹಿಳೆಯರಿಬ್ಬರನ್ನ ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಒಂಭತ್ತುಕೆರೆ, ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ಸಾಗುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿಗೆ ತಲುಪುತ್ತಿದ್ದಂತೆ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಚಾಲಕನಿಲ್ಲದ ರಿಕ್ಷಾವು ಮುಂದೆ ಚಲಿಸಿದ್ದು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ನಿತ್ಯಾನಂದ ಎಂಬವರ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯನ್ನ ವೈದ್ಯರ ಕ್ಲಿನಿಕ್ ಗೆ ಬಿಡಲು ಮಜೀದ್ ತೆರಳಿದ್ದರಂತೆ.
ಮೃತ ಮಜೀದ್ ಅವರು ಶ್ರಮ ಜೀವಿಯಾಗಿದ್ದು ಹಗಲಿರುಳು ರಿಕ್ಷಾ ಚಲಾಯಿಸಿ ಸಂಪಾದನೆ ಮಾಡಿ ಕುಟುಂಬಕ್ಕೆ ಆಧಾರವಾಗಿದ್ದರು. ದಿನ ನಿತ್ಯವೂ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ತನ್ನ ರಿಕ್ಷಾದಲ್ಲಿ ಮಕ್ಕಳ ಸ್ಕೂಲ್ ಟ್ರಿಪ್ ಮಾಡಿ ಬದುಕು ಸಾಗಿಸುತ್ತಿದ್ದರು. ಅವರು ಪತ್ನಿ, ಒಂದು ಗಂಡು, ಮತ್ತೊಂದು ಹೆಣ್ಣು ಮಗುವನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Auto driver gets heart attack while driving at kotekar, dies on spot. Two passengers escape unhurt. The deceased has been identified as Abdul Majeed native of Ullal.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm