ಬ್ರೇಕಿಂಗ್ ನ್ಯೂಸ್
15-08-24 10:28 pm Mangalore Correspondent ಕರಾವಳಿ
ಉಳ್ಳಾಲ, ಆ.15: ಏಕತೆ, ಒಗ್ಗಟ್ಟು, ಸೌಹಾರ್ದತೆ ಇದ್ದರೆ ಮಾತ್ರ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಕ್ಷೇತ್ರದ ಜನರು ನನಗೆ ಶಾಂತಿಯ ವಾತಾವರಣ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನ ನಿಮ್ಮ ಕಾಲ ಬುಡಕ್ಕೆ ತರುವ ಜವಬ್ದಾರಿ ನನ್ನದು ಎಂದು ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ಬಳಿ ನಡೆದ ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವು ಮೊದಲು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ನಮ್ಮನ್ನಗಲಿದ ವೀರ ಸ್ವಾತಂತ್ರ್ಯ ಹೋರಾಟಗಾರರು ದೇಶದ ಬೆಳವಣಿಗೆಯ ಬಗ್ಗೆ ಚಿಂತನೆ ನಡೆಸಿದ್ದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಳಲ್ಲಿ ಬಹಳಷ್ಟು ದೇಶ ಪ್ರೇಮಿಗಳು ಭಾರತ ಮಾತೆಗಾಗಿ ತ್ಯಾಗ, ಬಲಿದಾನ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ನಾವೆಂದಿಗೂ ಮರೆಯದೆ ಸದಾ ಸ್ಮರಿಸುವ ಕೆಲಸ ಮಾಡಬೇಕು.
ಅಂದಿನ ಹೋರಾಟಗಾರರು ದೇಶಪ್ರೇಮ, ಏಕತೆಯಿಂದ ಒಗ್ಗಟ್ಟಾಗಿ ಹೋರಾಟ ಮಾಡಿದ ಪರಿಣಾಮ ನಮ್ಮ ದೇಶ ಇಂದು ಸ್ವತಂತ್ರಗೊಂಡಿದೆ. ಯಾವ ದೇಶದಲ್ಲಿ ಒಗ್ಗಟ್ಟು ಇರುತ್ತದೋ ಆ ದೇಶ ಕ್ಷಿಪ್ರವಾಗಿ ಅಭಿವೃದ್ಧಿ ಹೊಂದುತ್ತದೆ. ನಾನು ಪ್ರತಿನಿಧಿಸುವ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ಮೂವತ್ತು ವರುಷಗಳ ಕಾಲ ಬಾಳಿಕೆ ಬರುವ ಅಭಿವೃದ್ಧಿ ಕಾಮಗಾರಿಗಳ ನೀಲ ನಕಾಶೆ ತಯಾರಾಗಿದೆ. ಆರು ತಿಂಗಳ ಒಳಗೆ ಕ್ಷೇತ್ರದ ಜನರ ಕನಸಿನ 24 ಗಂಟೆ ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸುವುದು ನನ್ನ ಜವಾಬ್ದಾರಿ. ಅದೇ ರೀತಿ ಕ್ಷೇತ್ರದಲ್ಲಿ ಎಷ್ಟೇ ದೊಡ್ಡ ಯೋಜನೆ ಬಂದರೂ ವಿದ್ಯುತ್ ಶಕ್ತಿಯ ಕೊರತೆ ನೀಗಿಸಲು ದೂರದೃಷ್ಟಿಯ ಯೋಜನೆ ಹಾಕಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸ್ಪೀಕರ್ ಖಾದರ್ ಗೌರವಿಸಿದರು. ಕಾರ್ಯಕ್ರಮಕ್ಕೂ ಮುನ್ನ ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ತನಕ ಆಕರ್ಷಕ ಪಥ ಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಈಶ್ವರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಶೈಲಾ ಕಾರಗಿ, ತಾಲೂಕು ಕಂದಾಯ ನಿರೀಕ್ಷಕ ಪ್ರಮೋದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉದ್ಯಮಿ ಕಣಚೂರು ಮೋನು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಪ್ರಮುಖರಾದ ಇಬ್ರಾಹಿಂ ಕೋಡಿಜಾಲ್, ಕೆಎಂಕೆ ಮಂಜನಾಡಿ ಮೊದಲಾದವರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕರಾದ ತ್ಯಾಗಂ ಹರೇಕಳ ಸ್ವಾಗತಿಸಿ ರಾಧಾ ಮೋಹನ್ ಶಿರ್ಲಾಲ್ ನಿರೂಪಿಸಿದರು.
A huge national flag was hoisted on a 110 feet tall flag post near the Ullal overbridge on the occasion of the 78th Independence Day on August 15, Thursday. U T Khader, local MLA unfurled the national flag.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm