ಬ್ರೇಕಿಂಗ್ ನ್ಯೂಸ್
15-08-24 11:12 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 15: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಲೋಕಾರ್ಪಣೆಗೊಳಿಸಿದರು. 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನ 53 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ಕಟ್ಟಡಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆಯಿಲ್ಲದಂತೆ ಅತ್ಯಂತ ಸುಸಜ್ಜಿತವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಸ್ಪೆಷಾಲಿಟಿ ಬ್ಲಾಕ್ ನಿರ್ಮಿಸಲಾಗಿದೆ ಎಂದರು. ಜಿಲ್ಲಾಸ್ಪತ್ರೆಯಾಗಿ ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನ ಒದಗಿಸುವಲ್ಲಿ ಮಾದರಿಯಾಗಿದೆ. ಖಾಸಗಿ ಸಂಸ್ಥೆ ಕೆ.ಎಂ.ಸಿ ಅವರೊಂದಿಗೆ ಒಪ್ಪಂದ ಮೂಲಕ ವೆನ್ಲಾಕ್ ಆಸ್ಪತ್ರೆ ಹಲವು ವರ್ಷಗಳಿಂದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಚಿಕಿತ್ಸೆಗಳನ್ನ ಒದಗಿಸುತ್ತ ಬಂದಿದೆ. ಇದೀಗ 250 ಹಾಸಿಗೆಯ ನೂತನ ಸರ್ಜಿಕಲ್ ಬ್ಲಾಕ್ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ನೆರವಾಗಲಿದೆ ಎಂದರು.
ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನ ಅಳವಡಿಸಲಾಗಿದೆ. 17 ಕೋಟಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವೆನ್ಲಾಕ್ ಆಸ್ಪತ್ರೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಷ್ಟೇ ಅಲ್ಲ ಸುತ್ತಮುತ್ತಲಿನ ಕರಾವಳಿ ಹಾಗೂ ಮಲೆನಾಡು ಭಾಗದ ಹತ್ತಾರು ಜಿಲ್ಲೆಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತ ಬಂದಿದೆ. ಆರೋಗ್ಯ ಸಚಿವನಾಗಿ ವೆನ್ಲಾಕ್ ಆಸ್ಪತ್ರೆಗೆ ಅಗತ್ಯ ಎಲ್ಲ ನೆರವುಗಳನ್ನ ನೀಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳ ಕಟ್ಟಡ ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ. ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇ.ಎನ್.ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೋ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್ ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.
ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಆಧುನಿಕ ವೈದ್ಯಕೀಯ ತಂತ್ರಜ್ಞಾನಕ್ಕೆ ಅನುಗುಣವಾಗಿ ಯಂತ್ರೋಪಕರಣಗಳ ಅಗತ್ಯ ಮನಗಂಡು ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಮುತುವರ್ಜಿಯಿಂದ ಸ್ಮಾರ್ಟ್ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ಮತ್ತು ಕೆ.ಎಂ.ಸಿ. ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.
Minister for Health and Family Welfare Dinesh Gundu Rao inaugurated the new surgical super-speciality building built by Mangaluru Smart City Ltd. (MSCL) on the premises of Government Wenlock Hospital here on August 15.
27-08-25 12:33 pm
Bangalore Correspondent
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm