ಬ್ರೇಕಿಂಗ್ ನ್ಯೂಸ್
08-12-20 06:43 pm Mangalore Correspondent ಕರಾವಳಿ
ಬೆಂಗಳೂರು, ಡಿ.8: ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡುವ ವಿಚಾರದಲ್ಲಿ ಮುಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕಿಡುವ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಕೋಟ್ಯಾನ್, ಕೋಟಿ- ಚೆನ್ನಯರೆಂದರೆ ದೈವಿಕ ಶಕ್ತಿ ಮಾತ್ರವಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ, ಬಲಿದಾನದ ಸಂಕೇತ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲೂ ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದವರು ಕೋಟಿ ಚೆನ್ನಯರು. ಅವಳಿ ವೀರರನ್ನು ಕೇರಳ, ಕರ್ನಾಟಕ, ಮಹಾರಾಷ್ಟ್ರದಲ್ಲಿ ದೇವರ ಸ್ಥಾನದಲ್ಲಿ ಪೂಜಿಸುತ್ತಾರೆ. ರಾಜ್ಯದ ಹೊರಗಿನಲ್ಲಿ 260ಕ್ಕೂ ಹೆಚ್ಚು ಗರಡಿಗಳನ್ನು ಸ್ಥಾಪನೆ ಮಾಡಿದ್ದರು. ಹೀಗಾಗಿ ಜಾತಿ, ಧರ್ಮದ ಭೇದ ಇಲ್ಲದೆ ಕೋಟಿ ಚೆನ್ನಯರು ಪೂಜೆಗೊಳ್ಳುತ್ತಿದ್ದಾರೆ. ಆದ್ದರಿಂದ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರುಷ ಕೋಟಿ- ಚೆನ್ನಯರ ಹೆಸರನ್ನು ಇಡಬೇಕೆಂಬ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಸದನ ಮನ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಉಮಾನಾಥ ಕೋಟ್ಯಾನ್, ಜನಾಭಿಪ್ರಾಯಕ್ಕೆ ಸ್ಪಂದಿಸಿ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ ಎಂದು ಹೇಳಿದ್ದಾರೆ.
Mulky-Moodbidri MLA Umanath Kotian on Tuesday, December 8 urged the Karnataka Legislative Assembly speaker Vishweshwar Hegde Kageri to recommend the union government to name Mangaluru International Airport after Tulunadu Bravehearts Koti-Chennayya.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am