ಬ್ರೇಕಿಂಗ್ ನ್ಯೂಸ್
18-08-24 10:55 pm Mangalore Correspondent ಕರಾವಳಿ
ಉಳ್ಳಾಲ, ಆ.18: ಮುಡಾ ಪ್ರಕರಣದ ಬಗ್ಗೆ ಒಬ್ಬ ಸಾಮಾನ್ಯ ಬ್ಲ್ಯಾಕ್ ಮೇಲರ್ ವ್ಯಕ್ತಿ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿದ್ದಾನೆ. ಯಾವುದೇ ಎಫ್ಐಆರ್ ದಾಖಲಾಗದೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಕಾನೂನು ಬಾಹಿರ. ಕೇಂದ್ರ ಸರಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಕೂಡಲೇ ರಾಜೀನಾಮೆ ಕೊಟ್ಟು ತೆರಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಆಗ್ರಹಿಸಿದ್ದಾರೆ.
ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಸೈಟ್ ವಿಚಾರವನ್ನು ಮುಂದಿಟ್ಟು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿದ ಬಗ್ಗೆ ರಾಜ್ಯಪಾಲರು ಮತ್ತು ವಿಪಕ್ಷ ಬಿ.ಜೆ.ಪಿ ಮತ್ತು ಜೆಡಿಎಸ್ ಪಿತೂರಿ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ಫ್ಲೈ ಓವರ್ ಕೆಳಗಡೆ ಭಾನುವಾರ ಸಂಜೆ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿಗರೇ ನಿಮ್ಮ ಅನೈತಿಕ ರಾಜಕಾರಣ ಬಿಟ್ಟು ನೈತಿಕ ರಾಜಕಾರಣ ಮಾಡಿ. ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ ಆರೋಪ ಬಂದಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಟ್ಟು ತೆರಳಿದ್ದರು ಅಂತ ಬಿಜೆಪಿಗರು ಸಬೂಬು ನೀಡುತ್ತಾರೆ. ಯಡಿಯೂರಪ್ಪನವರು ಭ್ರಷ್ಟಾಚಾರದಲ್ಲಿ ತೊಡಗಿಸಿದ ಪರಿಣಾಮವೇ ಅವರು ಅಂದು ರಾಜೀನಾಮೆ ಕೊಟ್ಟು ತೆರಳಿದ್ದರು. ಆದರೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಥವರಲ್ಲ. ಅವರು ಎಂದಿಗೂ ಶುದ್ಧ ಹಸ್ತದ ರಾಜಕಾರಣಿಯಾಗಿದ್ದು, ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಎಂದಿಗೂ ನಾವಿದ್ದೇವೆ ಎಂದರು.
ಕೆಪಿಸಿಸಿ ವಕ್ತಾರರಾದ ಎಂ.ಜಿ ಹೆಗ್ಡೆ ಮಾತನಾಡಿ ರಾಜಧರ್ಮ ಪಾಲಿಸುವವನಾದರೆ ಮಾತ್ರ ರಾಜ್ಯಪಾಲರಾಗಲು ಅರ್ಹರು. ಆದರೆ ಕರ್ನಾಟಕದ ರಾಜ್ಯಪಾಲರು ಮೋದಿ, ಅಮಿತ್ ಷಾ ಆದೇಶಗಳನ್ನ ಪಾಲಿಸುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸಿಗರ ಮೇಲೆ ಇಡಿಯನ್ನ ಅಸ್ತ್ರವನ್ನಾಗಿ ಬಳಸಲಾಗುತ್ತಿದೆ. ಕಾಂಗ್ರೆಸ್ ಆದರೆ ಹಿಡಿ, ಬಿಜೆಪಿಯಾದರೆ ಬಿಡಿ ಎಂಬುದೇ ಇಡಿ ಇಲಾಖೆಯ ಪಾಲಿಸಿಯಾಗಿದೆ. ಸಿದ್ಧರಾಮಯ್ಯ ಅವರು ತೊಡುವ ಬಿಳಿ ವಸ್ತ್ರದಷ್ಟೇ ಪರಿಶುದ್ಧ ರಾಜಕಾರಣಿ. ರಾಹುಲ್ ಗಾಂಧಿಗೆ ನೀಡಿದ್ದ ಮಾನಸಿಕ ಹಿಂಸೆಯನ್ನ ಸಿದ್ದರಾಮಯ್ಯರಿಗೂ ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನು ದಾಳವಾಗಿ ಬಳಸಿ ಸಿದ್ಧರಾಮಯ್ಯ ನೇತೃತ್ವದ ಸರಕಾರವನ್ನು ಉರುಳಿಸಲು ನೋಡಿದ್ದರು. ಆದರೆ ಅದು ಕೈಗೂಡಿರಲಿಲ್ಲ. ಬಿಜೆಪಿಯವರು ಸರಿಯಾದ ಹೆದ್ದಾರಿಯಲ್ಲಿ ರಾಜಕಾರಣ ಮಾಡಿ, ಇಲ್ಲವಾದರೆ ಉತ್ತರ ಪ್ರದೇಶದಂತೆ ಎಲ್ಲಾ ಕಡೆಗಳಲ್ಲೂ ಜನರು ನಿಮ್ಮನ್ನ ಗುಡಿಸಿ ಮೂಲೆಗುಂಪು ಮಾಡಲಿದ್ದಾರೆ ಎಂದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್ ಮಹಮ್ಮದ್, ಜಿ.ಎ.ಬಾವಾ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Karnataka governor has done something against the law, protest by congress in Ullal for FIR against cm.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm