ಬ್ರೇಕಿಂಗ್ ನ್ಯೂಸ್
19-08-24 06:40 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಸಿಎಂ ಸಿದ್ದರಾಮಯ್ಯ ಮೇಲೆ ಗುರುತರ ಆರೋಪ ಮತ್ತು ಅದಕ್ಕೆ ತಕ್ಕಷ್ಟು ಸಾಕ್ಷ್ಯ ಇರುವುದರಿಂದಲೇ ರಾಜ್ಯಪಾಲರು ಪ್ರಾಸಿಕ್ಯುಶನ್ ಅನುಮತಿ ನೀಡಿದ್ದಾರೆ. ಹೀಗಿರುವಾಗ ಆರೋಪಿತ ವ್ಯಕ್ತಿಯೇ ಸಾಂವಿಧಾನಿಕ ಹುದ್ದೆಯಲ್ಲಿದ್ದು ವಿಚಾರಣೆ ಎದುರಿಸುವುದು ಸರಿಯಲ್ಲ. ತಾನೊಬ್ಬ ಕಳಂಕರಹಿತ, ಭ್ರಷ್ಟಾಚಾರ ರಹಿತ ವ್ಯಕ್ತಿಯೆಂದು ಹೇಳಿಕೊಂಡು ಬಂದ ಸಿದ್ದರಾಮಯ್ಯ ಈಗ ರಾಜಿನಾಮೆ ಕೊಟ್ಟು ಪ್ರಕರಣ ಎದುರಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ವಿಚಾರಣೆಯನ್ನು ಲೋಕಾಯುಕ್ತ ಅಥವಾ ಎಸ್ಐಟಿ ಅಧಿಕಾರಿಗಳೇ ನಡೆಸಬೇಕು. ರಾಜ್ಯ ಸರ್ಕಾರದ ಮುಖ್ಯಸ್ಥ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಸರ್ಕಾರದ ಅಧೀನ ಸಂಸ್ಥೆಯ ಅಧಿಕಾರಿಗಳು ವಿಚಾರಣೆ ನಡೆಸುವುದು ಹೇಗೆ. ಆರೋಪದ ಬಗ್ಗೆ ಸರಿಯಾದ ವಿಚಾರಣೆ ನಡೆಸುವುದು ಇದರಿಂದ ಸಾಧ್ಯವಿಲ್ಲ. ಹೀಗಾಗಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿಯೇ ವಿಚಾರಣೆ ಎದುರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುವ ನೆಪದಲ್ಲಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಬಾಂಗ್ಲಾ ರೀತಿಯ ಹಿಂಸಾಚಾರ ನಡೆಸುವ ಬಗ್ಗೆ ಮಾತಾಡಿದ್ದಾರೆ. ಆಮೂಲಕ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರಚೋದನೆ ನೀಡಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡಿದ್ದಿರಬಹುದು. ಬಿಜೆಪಿ ಈ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತಿದ್ದು, ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕೆಂದು ಒತ್ತಾಯಿಸುತ್ತೇನೆ ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಆಪ್ತರಾದ ಐವಾನ್ ಡಿಸೋಜ ರಾಜ್ಯದಲ್ಲಿ ಬಾಂಗ್ಲಾ ರೀತಿಯ ಹಿಂಸಾಚಾರಕ್ಕೆ ಕರೆ ಕೊಟ್ಟಿದ್ದಾರೆ. ಆದರೆ ರಾಜ್ಯದ ಪೊಲೀಸರು ಸಶಕ್ತರಿದ್ದಾರೆ. ಇದನ್ನೆಲ್ಲ ಹತ್ತಿಕ್ಕಲು ಶಕ್ತರಿದ್ದಾರೆ. ನಾವೇನೂ ಇದಕ್ಕೆಲ್ಲ ಭಯ ಪಡಲ್ಲ. ನಮ್ಮ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ಮಂಗಳೂರು ಪೊಲೀಸರು ಈಗ ಐವಾನ್ ಡಿಸೋಜ ವಿರುದ್ಧವೂ ಕೇಸು ದಾಖಲಿಸಬೇಕು ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕಿಶೋರ್ ಬೊಟ್ಯಾಡಿ, ಯತೀಶ್ ಆರ್ವಾರ್, ನಿತಿನ್ ಕುಮಾರ್, ಸಂಜಯ ಪ್ರಭು ಮತ್ತಿತರರಿದ್ದರು.
Mangalore MP Brijesh Chowta slams Ivan dsouza for his remarks on governor, demands Sumoto case.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm