ಬ್ರೇಕಿಂಗ್ ನ್ಯೂಸ್
19-08-24 06:52 pm Mangalore Correspondent ಕರಾವಳಿ
ಮಂಗಳೂರು,ಆ.19: ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಿದ್ದು ನೇರ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ.
ಕೋರ್ಸ್ ಮುಗಿಸಿದ ಬಳಿಕ ಪ್ರತಿಷ್ಟಿತ ಕಂಪನಿಗಳಾದ ಇನ್ಫೋಸಿಸ್, ವಿಪ್ರೋ, ಟಿ.ಸಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ. ಹಾಗೆಯೇ ಇತರ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮಾನ್ಯುಫ್ಯಾಕ್ಚರಿಂಗ್ ಗಳಿಗೆ ಪ್ರವೇಶಾತಿ ನಡೆಯುತ್ತಿದೆ. ಪ್ರತಿಷ್ಟಿತ ಕಂಪನಿಗಳಾದ ಟೊಯೋಟಾ ಕಿರ್ಲೋಸ್ಕರ್, ಹೆಚ್.ಎ.ಎಲ್, ವಿಪ್ರೋ ಕವಾಸಕಿ, ಇಂಡೋ-ಮಿಮ್, ಟಿ.ವಿ.ಎಸ್. ಮುಂತಾದ ಕಂಪನಿಗಳಲ್ಲಿ 100% ಉದ್ಯೋಗಾವಕಾಶವಿರುತ್ತದೆ.
ಕೋರ್ಸ್ಗಳ ಪ್ರವೇಶಾತಿಗೆ ಎಸ್ಸೆಸ್ಸೆಲ್ಸಿ ಪಾಸ್ ಅಥವಾ ಪಿಯುಸಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಈ ಕೋರ್ಸ್ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದ್ದು, 30% ಥಿಯರಿ ಮತ್ತು 70% ಪ್ರಾಕ್ಟಿಕಲ್ ಆಗಿದ್ದು 100% ಉದ್ಯೋಗಾಧಾರಿತ ಕೋರ್ಸ್ ಗಳಾಗಿರುತ್ತವೆ.
ಕೋರ್ಸ್ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿ ನೀಡಲಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ರೂ. 20,000 ವರೆಗೆ ಶಿಷ್ಯವೇತನ ಸಹ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ, ಬೈಕಂಪಾಡಿ, ಮಂಗಳೂರು-575011 ಮೊಬೈಲ್ ನಂ : 9008263660, 0824-2408003, 9481265587, 9741667257, 9483920114 ಸಂಪರ್ಕಿಸುವಂತೆ ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ; ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಆನ್ಲೈನ್ ಮೂಲಕ ವೆಬ್ಸೈಟ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005 ಸಂಪರ್ಕಿಸುವಂತೆ ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Baikampady GTTC Government Tool Room and Training Centre diploma course application date extended till August 31st.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm