ಬ್ರೇಕಿಂಗ್ ನ್ಯೂಸ್
20-08-24 06:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಮೈಸೂರು ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಪಾರದರ್ಶಕ ತನಿಖೆಗೆ ಅನುವಾಗುವಂತೆ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದರು.
ಈಗಾಗಲೇ ರಾಷ್ಟ್ರಮಟ್ಟದಲ್ಲಿ ಪ್ರಕರಣ ಸದ್ದು ಮಾಡಿದ್ದು ಇಡೀ ದೇಶವೇ ಕರ್ನಾಟಕವನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದೆ. ಈ ಸಂದರ್ಭದಲ್ಲಿ “ನಾನು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ರಾಜ್ಯಪಾಲರೇ ರಾಜೀನಾಮೆ ನೀಡಲಿ” ಎಂದು ಮೊಂಡುತನ ಪ್ರದರ್ಶಿಸಿದ ಮುಖ್ಯಮಂತ್ರಿಗಳಿಗೆ ಮಂಗಳೂರಿನಲ್ಲಿ ಕಾಂಗ್ರೆಸ್ಸಿನ ಪುಂಡಪೋಕರಿಗಳು ಬಸ್ಸಿಗೆ ಕಲ್ಲು ತೂರಿ ಸಾರ್ವಜನಿಕರಲ್ಲಿ ಭಯಭೀತ ವಾತಾವರಣ ಸೃಷ್ಟಿಸುವ ಮೂಲಕ ಬೆಂಬಲ ನೀಡಿದ್ದಾರೆ. ಕಲ್ಲೆಸೆದ ಕಾಂಗ್ರೆಸ್ಸಿನ ಆರೋಪಿಗಳಿಗೆ ಠಾಣೆಯಲ್ಲಿ ಜಾಮೀನು ನೀಡಿ ಗೌರವದಿಂದ ಬಿಟ್ಟು ಕಳುಹಿಸುವ ಮಟ್ಟಿಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದು ಜಿಲ್ಲೆಯ ಜನತೆಯ ದೌರ್ಭಾಗ್ಯ. ಈ ಬಗ್ಗೆ ಬಸ್ ಮಾಲಕರ, ಚಾಲಕರು ಕೂಡ ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರಾಗಲೀ, ಕಾಂಗ್ರೆಸ್ಸಿನವರಾಗಲೀ ಯಾರೂ ಸಂವಿಧಾನಕ್ಕೆ, ಕಾನೂನಿಗೆ ಅತೀತರಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.
ಬಾಂಗ್ಲಾದಲ್ಲಿ ನಡೆದ ದಂಗೆಯಂತೆ ಮಂಗಳೂರಿನಲ್ಲು ನಡೆಸಿ ರಾಜ್ಯಪಾಲರ ಕಚೇರಿಗೆ ನುಗ್ಗಿ ಅವರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜ ಅವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವುದನ್ನು ಬಿಟ್ಟು ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಪೊಲೀಸರು ಸಿದ್ದರಾಮಯ್ಯ ಬಗ್ಗೆ ಯಾರೋ ಸಾಮಾಜಿಕ ಜಾಲತಾಣದಲ್ಲಿ ಗೀಚಿದ್ದಕ್ಕೆ ಹೇಗೆ ಸುಮೊಟೊ ಕೇಸು ದಾಖಲಿಸಿಕೊಂಡರು? ವಾರ್ಡ್ ಮಟ್ಟದಲ್ಲಿಯೂ ಚುನಾವಣೆಗೆ ನಿಂತು ಗೆಲ್ಲಲಾಗದ ವ್ಯಕ್ತಿಗಳು ಸಿದ್ದರಾಮಯ್ಯನವರಿಗೆ ಬಕೆಟ್ ಹಿಡಿದು ಭಿಕ್ಷೆ ರೂಪದಲ್ಲಿ ಸೀಟು ಗಿಟ್ಟಿಸಿ ಅದರ ಋಣ ಸಂದಾಯಕ್ಕಾಗಿ ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದು ಅಕ್ಷಮ್ಯ. ಕೂಡಲೇ ಭ್ರಷ್ಟಾಚಾರದ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ಇವರ ಮೇಲೆ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.
Plan to spoil the name of Mangalore city is done by Congress state government slams MLA Vedavyas kamath.
21-03-25 10:41 pm
HK News Desk
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
18 BJP MLAs suspended, assembly: ಸ್ಪೀಕರ್ ಪೀಠಕ...
21-03-25 05:46 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm