ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am