ಬ್ರೇಕಿಂಗ್ ನ್ಯೂಸ್
21-08-24 02:45 pm Mangalore Correspondent ಕರಾವಳಿ
ಕಾರ್ಕಳ, ಆಗಸ್ಟ್ 21: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಕಾರ್ಕಳ -ಪಡುಬಿದ್ರಿ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರು ತುಂಬಿರುತ್ತಾರೆ. ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳು ಬಸ್ಗಳ ಮೆಟ್ಟಿಲಲ್ಲಿ ನೇತಾಡಿಕೊಂಡು ಹೋಗುತ್ತಿದ್ದಾರೆ. ಈ ರೂಟಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
19 year old student dies after thrown from moving bus at karkala. The deceased has been identified as Janeeth Shetty.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm