ಬ್ರೇಕಿಂಗ್ ನ್ಯೂಸ್
22-08-24 10:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಮಂಗಳೂರು ನಾಗರಿಕರ ಹಲವು ವರ್ಷಗಳ ಬೇಡಿಕೆಯಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ವೃತ್ತದಲ್ಲಿ ರಸ್ತೆ ಅಗಲೀಕರಣ ಮತ್ತು ಬೈಪಾಸ್ ರಸ್ತೆಯ ಪೂರ್ವ ಹಂತದ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ಸಂಜೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತೂರು ವೃತ್ತವು ಹೆದ್ದಾರಿ ವ್ಯಾಪ್ತಿಯಲ್ಲಿದ್ದು, ದಿನ ನಿತ್ಯವೂ ಹೆಚ್ಚಿನ ವಾಹನ ದಟ್ಟಣೆ ಇರುವ ಕಾರಣ ಪೂರ್ಣ ಹಂತದ ಕಾಮಗಾರಿ ಆರಂಭಿಸುವುದಕ್ಕೂ ಮೊದಲು ಟ್ರಾಫಿಕ್ ಸಮಸ್ಯೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೀಗಾಗಿ, ಸಂಸದರು ಈ ವಿಚಾರಗಳ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜತೆಗೆ ಚರ್ಚಿಸಿ ಕೆಲವು ಪೂರಕ ಸಲಹೆಗಳನ್ನು ನೀಡಿದ್ದಾರೆ. ರಸ್ತೆ ಯಾವ ರೀತಿ ಬರತ್ತೆ ಮತ್ತು ಅದಕ್ಕು ಮುನ್ನ ಟ್ರಾಫಿಕ್ ಸಮಸ್ಯೆ ಆಗದಂತೆ ಹೇಗೆ ನೋಡಿಕೊಳ್ಳಬೇಕು ಎನ್ನುವ ಬಗ್ಗೆ ಸೂಚನೆಗಳನ್ನು ಕೊಟ್ಟಿದ್ದಾರೆ.
ಇದೇ ವೇಳೆ ಸಂಸದ ಕ್ಯಾ. ಚೌಟ ಅವರು ರಸ್ತೆ ಅಗಲೀಕರಣಕ್ಕೆ ಭೂಮಿ ಬಿಟ್ಟು ಕೊಟ್ಟಿರುವ ಸ್ಥಳೀಯ ನಿವಾಸಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಅಲ್ಲದೆ, ಸ್ಥಳೀಯ ಜನರನ್ನು ನೇರವಾಗಿ ಭೇಟಿಯಾಗಿ ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ನಂತೂರು ಮತ್ತು ಕೆಪಿಟಿ ವೃತ್ತದ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಆಗಿದ್ದರೂ ಮಂಗಳೂರು ನಗರವನ್ನು ಹಾದು ಹೋಗುವುದರಿಂದ ಇಡೀ ದಿನ ಟ್ರಾಫಿಕ್ ಸಮಸ್ಯೆಯಾಗಿದೆ. ಈ ಭಾಗದಲ್ಲಿ ರಸ್ತೆ ಅಗಲೀಕರಣ ಆಗೋದಕ್ಕೂ ಮೊದಲು ಪರ್ಯಾಯ ಸರ್ವಿಸ್ ರಸ್ತೆ ಮಾಡಿ ಕೊಡಬೇಕು. ಆನಂತರವೇ, ನಿರ್ದಿಷ್ಟ ಸಮಯದ ಮಿತಿಯಲ್ಲಿ ರಸ್ತೆ ಕಾಮಗಾರಿ ಆರಂಭಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ ನೀಡಿದ್ದಾರೆ. ಹೀಗಾಗಿ ಆರಂಭದಲ್ಲಿ ನಂತೂರು ವೃತ್ತದ ಆಸುಪಾಸಿನಲ್ಲಿ ಕಾಮಗಾರಿ ಆರಂಭಗೊಂಡಿದೆ.
Mangalore MP Chowta Directs NHAI to make service road first before road extension. MP captian Brijesh Chowta also visited that have given their lands for the extension for roads.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm