ಬ್ರೇಕಿಂಗ್ ನ್ಯೂಸ್
27-08-24 09:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರು ನಗರದ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ.
ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಎಂಬವರು ತಮ್ಮಿಂದ 41 ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು 2021ರಲ್ಲಿ ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಲು ಬಂದ ಸಂದರ್ಭ ಪರಿಚಯವಾಗಿದ್ದರು. ಬಳಿಕ ವೀರೇಂದ್ರ ಶೆಟ್ಟಿಯವರ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಟಿ ಪದ್ಮಜಾ ಹಂತ ಹಂತವಾಗಿ 41 ಲಕ್ಷ ರೂ. ಸಾಲವನ್ನು ಪಡೆದಿದ್ದರು. ಸಾಲದ ಭದ್ರತೆಗೆ ಅವರು 40 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪದ್ಮಜಾ ರಾವ್ ಮನೆಯಿಂದ ಚೆಕ್ ಕಳವು ಮಾಡಿ ಸಹಿಯನ್ನು ಪೋರ್ಜರಿ ಮಾಡಲಾಗಿದೆ ಎಂದು ಪದ್ಮಜಾ ರಾವ್ ಪರ ವಕೀಲರು ಕೋರ್ಟಿನಲ್ಲಿ ವಾದಿಸಿದ್ದರು. ಆದರೆ, ಇದಕ್ಕೆ ಪೂರಕ ಪುರಾವೆಗಳನ್ನು ಒದಗಿಸುವಲ್ಲಿ ಅವರು ವಿಫಲರಾಗಿದ್ದರು.
ಆದರೆ ಪದ್ಮಜಾ ರಾವ್ ಅವರು ಸಾಲ ಹಿಂತಿರುಗಿಸದ್ದರಿಂದ ವೀರೇಂದ್ರ ಅವರು ಚೆಕ್ ನಗದೀಕರಣಕ್ಕೆ ಮುಂದಾಗಿದ್ದು ಬ್ಯಾಂಕ್ನಲ್ಲಿ ಹಣವಿಲ್ಲದ್ದರಿಂದ ಚೆಕ್ ಬೌನ್ಸ್ ಆಗಿತ್ತು. ಬಳಿಕ ಪ್ರಕರಣ ಮಂಗಳೂರಿನ ಎಂಟನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ- ವಿವಾದವನ್ನು ಆಲಿಸಿದ ನ್ಯಾಯಾಲಯ, ನಟಿ ಪದ್ಮಜಾ ರಾವ್ ಹಣ ನೀಡದೇ ವಂಚಿಸಿದ್ದಾರೆ. ಹಾಗಾಗಿ, 40.20 ಲಕ್ಷ ರೂ. ದಂಡ ಪಾವತಿಸುವಂತೆ ಪದ್ಮಜಾ ರಾವ್ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ದಂಡದ ಮೊತ್ತದಲ್ಲಿ 40.17 ಲಕ್ಷ ರೂಪಾಯಿಯನ್ನು ದೂರುದಾರ ವೀರೇಂದ್ರ ಶೆಟ್ಟಿ ಅವರಿಗೆ ಹಾಗೂ ಉಳಿದ ಮೂರು ಸಾವಿರವನ್ನು ರಾಜ್ಯದ ಬೊಕ್ಕಸಕ್ಕೆ ತುಂಬಲು ನ್ಯಾಯಾಲಯ ಸೂಚಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
The 8th JMFC Court of Mangaluru has sentenced actress Padmaja Rao to three months of simple imprisonment and has imposed a penalty of Rs 40.20 lakhs on her in a cheque bounce case.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm