ಬ್ರೇಕಿಂಗ್ ನ್ಯೂಸ್
28-08-24 02:50 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ 'ಅಲೋಶಿಯಸ್ ಫೆಸ್ಟ್ 2024' ಆಗಸ್ಟ್ 31 ರಂದು ಕಾಲೇಜು ಆವರಣದ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವಿಯ ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಸಹ ಆಯೋಜಕಿ ಭವ್ಯಾ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಕೆಂಡಸಂಪಿಗೆ ಖ್ಯಾತಿಯ ನಟಿ ಮಾನ್ವಿತಾ ಕಾಮತ್ ಅವರು ಉತ್ಸವದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಗೌರವ ಅತಿಥಿಯಾಗಿ ಲೇಖಕಿ ಸೆರಾ ಫೆಲೆಕ್ಸ್ ಆಗಮಿಸಲಿದ್ದು ಅವರು ಬರೆದಿರುವ 'ಎ ಕ್ರೈ ಹರ್ಡ್ ಏಸ್ ಎ ಸಾಂಗ್' ಎನ್ನುವ ಪುಸ್ತಕ ಈ ವೇಳೆ ಬಿಡುಗಡೆಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಠಾಧಿಕಾರಿ ವಂ.ಮೆಲ್ವಿನ್ ಜೋಸೆಫ್ ಪಿಂಟೋ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಉತ್ಸವವನ್ನು 'ಹಬ್ಬಗಳ ಹಬ್ಬ' ಹಾಗೂ 'ಸಾಂಸ್ಕೃತಿಕ ಹಬ್ಬ' ಎಂಬ ಎರಡು ವಿಭಾಗಗಳಲ್ಲಿ ಆಯೋಜಿಸಲಾಗುವುದು. 'ಹಬ್ಬಗಳ ಹಬ್ಬ'ದಲ್ಲಿ ಒಟ್ಟು 31 ಶೈಕ್ಷಣಿಕ ಸ್ಪರ್ಧೆಗಳನ್ನು ಕಲಾ, ವಾಣಿಜ್ಯ, ವಿಜ್ಞಾನ, ಬಿಸಿಎ, ಬಿಬಿಎ, ಬಿವೋಕ್ ಹಾಗೂ ವಿಜ್ಞಾನ ಪ್ರದರ್ಶನಗಳು ಹಾಗೂ ಸಾಂಸ್ಕೃತಿಕ ಹಬ್ಬಗಳಲ್ಲಿ ಶಾಸ್ತ್ರೀಯ ನೃತ್ಯ ಫೇಸ್ ಪೈಂಟಿಂಗ್, ಮೆಹಂದಿ, ಕಸದಿಂದ ರಸ್ತೆ ಹಾಗೂ ವೈವಿದ್ಯಮ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಅದ್ವಿಕಾ ಶೆಟ್ಟಿ ಮಾತನಾಡಿ ”ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಉದ್ಯಮಿ
ಕನ್ಯಾನ ಸದಾಶಿವ ಶೆಟ್ಟಿ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಲೋಶಿಯಸ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರವೀಣ್ ಮಾರ್ಟಿಸ್ ಎಸ್.ಜೆ ಅವರು ವಹಿಸಲಿದ್ದಾರೆ. ವಿವಿಧ ಕಾಲೇಜುಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಮಾರು 37 ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಕುಲಪತಿ ಡಾ.ರೇಜಿ ಜಾನ್, ವ್ಯಾನ್ಸ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Mangalore Aloysius College to hold Aloysius Fest 2024 on August 31st. Aloysius Fest 2024 will be divided into two main categories: 'Festival of Festivals' and 'Cultural Festival'.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm