ಬ್ರೇಕಿಂಗ್ ನ್ಯೂಸ್
29-08-24 03:38 pm Mangalore Correspondent ಕರಾವಳಿ
ಉಳ್ಳಾಲ, ಆ.29: ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ದಿವ್ಯಾ ಸತೀಶ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಪ್ರವೀಣ್ ಬಗಂಬಿಲ ಆಯ್ಕೆಯಾಗಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಗಾದಿಗೆ ಸಾಮಾನ್ಯ, ಉಪಾಧ್ಯಕ್ಷ ಗಾದಿಗೆ ಹಿಂದುಳಿದ ವರ್ಗ(ಎ) ಮೀಸಲಿರಿಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಪಟ್ಟಣ ಪಂಚಾಯತ್ ಆರನೇ ವಾರ್ಡ್ ಬಗಂಬಿಲ-ವೈದ್ಯನಾಥ ನಗರದ ಬಿಜೆಪಿ ಸದಸ್ಯೆ ದಿವ್ಯಾ ಸತೀಶ್ ಶೆಟ್ಟಿ , ಹನ್ನೊಂದನೇ ವಾರ್ಡ್ ಮಡ್ಯಾರ್ ಕ್ಷೇತ್ರದ ಪಕ್ಷೇತರ ಸದಸ್ಯ ಹರೀಶ್ ರಾವ್, ಉಪಾಧ್ಯಕ್ಷ ಸ್ಥಾನಕ್ಕೆ ಐದನೇ ವಾರ್ಡ್ ಬಗಂಬಿಲದ ಬಿಜೆಪಿ ಪಟ್ಟಣ ಸದಸ್ಯ ಪ್ರವೀಣ್ ಬಗಂಬಿಲ ಮತ್ತು ಹದಿನಾರನೇ ವಾರ್ಡ್ ಅಜ್ಜಿನಡ್ಕದ ಕಾಂಗ್ರೆಸ್ ಸದಸ್ಯ ಅಹಮ್ಮದ್ ಬಾವ ಅಜ್ಜಿನಡ್ಕ ನಾಮಪತ್ರ ಸಲ್ಲಿಸಿದ್ದರು.



ಕೋಟೆಕಾರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಮಧ್ಯಾಹ್ನ ಪಟ್ಟಣ ಸದಸ್ಯರು ಅಭ್ಯರ್ಥಿಗಳ ಪರ ಕೈ ಎತ್ತುವ ಮೂಲಕ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಪ್ರಕ್ರಿಯೆ ನಡೆಸಿಕೊಟ್ಟರು. ನಿರೀಕ್ಷೆಯಂತೆ ಬಿಜೆಪಿಯ ದಿವ್ಯಾ ಸತೀಶ್ ಶೆಟ್ಟಿ ಮತ್ತು ಪ್ರವೀಣ್ ಬಗಂಬಿಲ ಅವರಿಗೆ ಸಂಸದ ಬ್ರಿಜೇಶ್ ಚೌಟ ಸೇರಿದಂತೆ ತಲಾ 12 ಮತಗಳು ಲಭಿಸಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದರು. ಪಕ್ಷೇತರ ಸದಸ್ಯ ಹರೀಶ್ ರಾವ್ ಮತ್ತು ಕಾಂಗ್ರೆಸಿನ ಅಹಮ್ಮದ್ ಬಾವ ಅಜ್ಜಿನಡ್ಕ ಅವರಿಗೆ ತಲಾ 6 ಮತಗಳು ಲಭಿಸಿದವು.
ನೂತನ ಅಧ್ಯಕ್ಷ , ಉಪಾಧ್ಯಕ್ಷರನ್ನು ಸಂಸದ ಬ್ರಿಜೇಶ್ ಚೌಟ, ತಹಶೀಲ್ದಾರ್ ಪುಟ್ಟರಾಜು ಅಭಿನಂದಿಸಿದರು. ಕೋಟೆಕಾರು ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ಮೇಲೆ 2021ರ ಡಿಸೆಂಬರ್ 27 ರಂದು ಎರಡನೇ ಬಾರಿ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನ ಗೆದ್ದು ಮೇಲುಗೈ ಸಾಧಿಸಿತ್ತು. ಕಾಂಗ್ರೆಸ್ 4, ಎಸ್ಡಿಪಿಐ ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳನ್ನು ಗೆದ್ದಿದ್ದರು.
ಅಧ್ಯಕ್ಷ , ಉಪಾಧ್ಯಕ್ಷ ಗಾದಿಯ ಮೀಸಲಾತಿ ತಕರಾರಿನಿಂದ ಬಿಜೆಪಿ ಬಹುಮತ ಗಳಿಸಿದರೂ ಆಡಳಿತ ನಡೆಸಲಾಗಿರಲಿಲ್ಲ. ಬರೋಬ್ಬರಿ ಎರಡು ವರುಷ ಎಂಟು ತಿಂಗಳ ಬಳಿಕ ಕೋಟೆಕಾರು ಪಟ್ಟಣ ಪಂಚಾಯತ್ನಲ್ಲಿ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ. ಇದೇ ವೇಳೆ, ಸಂಸದ ಬ್ರಿಜೇಶ್ ಚೌಟ ಮಾತನಾಡಿ ಕೋಟೆಕಾರಿನಲ್ಲಿ ಕಾಂಗ್ರೆಸ್ - ಎಸ್ಡಿಪಿಐ ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿ ಗೆದ್ದಿದೆ. ಪ್ರಧಾನಿ ಮೋದಿಯವರ ಮಹಿಳಾ ಸಬಲೀಕರಣದ ಪರಿಕಲ್ಪನೆಯನ್ನು ಕೋಟೆಕಾರಿನಲ್ಲಿ ಸಾಮಾನ್ಯ ವರ್ಗದ ಮಹಿಳೆಗೆ ಅಧಿಕಾರ ಕೊಡುವ ಮೂಲಕ ನೆರವೇರಿಸಿದ್ದೇವೆ. ಇದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಸಾಧ್ಯ. ನೂತನ ಅಧ್ಯಕ್ಷೆ ದಿವ್ಯ ಅವರು ಮಹಿಳೆಯರನ್ನ ಆರ್ಥಿಕ, ಸಾಮಾಜಿಕವಾಗಿ ಸಬಲೀಕರಣ ಮಾಡುವಲ್ಲಿ ಕಾರ್ಯ ಪೃವೃತ್ತರಾಗಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಆಶೋತ್ತರಗಳನ್ನ ಈಡೇರಿಸಿ, ಶೋಷಿತ, ದಲಿತ, ಹಿಂದುಳಿದ ವರ್ಗದವರ ಸಮಸ್ಯೆಗಳಿಗೆ ಸ್ಫಂದನೆ ನೀಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ ಲಿಮಿಟೆಡ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಜಿಲ್ಲಾ ವಕ್ತಾರರಾದ ಮೋಹನ್ ರಾಜ್ ಕೆ.ಆರ್, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಕ್ಷೇತ್ರಾಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲು, ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟ್ಟು, ಸುಜಿತ್ ಮಾಡೂರು, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಧವಿ ಉಳ್ಳಾಲ್, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜಯಶ್ರೀ ಪ್ರಪುಲ್ಲದಾಸ್, ಉದಯ್ ಶೆಟ್ಟಿ ಸುಳ್ಳೆಂಜೀರ್, ಪ್ರಮುಖರಾದ ಚಂದ್ರಶೇಖರ್ ಉಚ್ಚಿಲ್, ಸುಮನಾ ಮೊದಲಾದವರು ಉಪಸ್ಥಿತರಿದ್ದರು.
Mangalore Bjp bags victory in Kotekar panchyath election. Dakshina Kannada MP captian Brijesh Chowta congratulation both the president and the vice president for winning the elections.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm