ಬ್ರೇಕಿಂಗ್ ನ್ಯೂಸ್
05-09-24 03:51 pm Udupi Correspondent ಕರಾವಳಿ
ಉಡುಪಿ, ಸೆ.5: ಹಿಜಾಬ್ ವಿವಾದ ಕಾರಣಕ್ಕೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ ರಾಮಕೃಷ್ಣ ಅವರಿಗೆ ಪ್ರಶಸ್ತಿ ಕೊಡುವುದಕ್ಕೆ ಪ್ರಗತಿಪರರಿಂದ ಆಕ್ಷೇಪ ವ್ಯಕ್ತವಾಗಿದ್ದು, ರಾಜ್ಯ ಶಿಕ್ಷಣ ಇಲಾಖೆ ಪ್ರಶಸ್ತಿಯನ್ನು ತಡೆಹಿಡಿದಿದೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಜ್ಯದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಇಬ್ಬರು ಪ್ರಾಂಶುಪಾಲರು ಸೇರಿದಂತೆ 20 ಪ್ರಾಥಮಿಕ ಶಾಲೆ ಶಿಕ್ಷಕರು, 11 ಪ್ರೌಢಶಾಲೆ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿ ಪಟ್ಟಿಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿಜಿ ರಾಮಕೃಷ್ಣ ಹೆಸರೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪಟ್ಟಿಯಿಂದ ಇವರ ಹೆಸರನ್ನು ಶಿಕ್ಷಣ ಇಲಾಖೆ ತಡೆಹಿಡಿದಿದೆ.
ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಡೆದಿದ್ದ ಹಿಜಾಬ್ ವಿವಾದ ಸಂದರ್ಭದಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ತಡೆದು ನಿಲ್ಲಿಸಲಾಗಿತ್ತು. ಇದಕ್ಕಾಗಿ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರನ್ನು ಹೊಣೆಯಾಗಿಸಿ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಯಲಾಗಿದೆ.
ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದ ಫೋಟೊ ವೈರಲ್ ಆಗಿತ್ತು. ಹೀಗಾಗಿ ಸದ್ರಿ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಬಾರದು ಎಂದು ಕೆಲವು ಪ್ರಗತಿಪರರು ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಇವರ ಒತ್ತಡಕ್ಕೆ ಮಣಿದು ರಾಮಕೃಷ್ಣ ಹೆಸರು ಕೈಬಿಟ್ಟಿದೆ. ಅಲ್ಲದೆ, ಸೆ.5ರಂದು ಶಿಕ್ಷಕ ದಿನದ ಪ್ರಯುಕ್ತ ಇವರೊಬ್ಬರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನೊಬ್ಬ ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ಕಾಲೇಜು ಪ್ರಾಂಶುಪಾಲ ಎ.ರಾಮೇ ಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
The state government has decided to withhold the Teachers' Day Award originally given to Ramakrishna B J, principal of the Government Pre-University College in Kundapur, due to a controversy. The decision to honour Ramakrishna with the state-level 'Best Principal Award' faced objections from 'progressive' groups.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm