ಬ್ರೇಕಿಂಗ್ ನ್ಯೂಸ್
08-09-24 10:16 pm Mangalore Correspondent ಕರಾವಳಿ
ಮಂಗಳೂರು, ಸೆ 08: ರಸ್ತೆ ದಾಟುತ್ತಿದ್ದ ಅಮ್ಮನಿಗೆ ಕಣ್ಣೆದುರಲ್ಲೇ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಾಗ ಸಣ್ಣ ಪ್ರಾಯದ ಬಾಲಕಿಯೇ ತನ್ನ ಪೂರ್ತಿ ಶಕ್ತಿ ಬಳಸಿ ಆಟೋ ರಿಕ್ಷಾವನ್ನು ಮೇಲೆತ್ತಿದ ಘಟನೆ ಕಿನ್ನಿಗೋಳಿ ಬಳಿ ನಡೆದಿದ್ದು ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಿನ್ನಿಗೋಳಿಯ ರಾಜರತ್ನಪುರ ನಿವಾಸಿ ಚೇತನಾ (35) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಮಹಿಳೆ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲು ರಸ್ತೆ ದಾಟಿ ಬರುತ್ತಿದ್ದರು. ಈ ವೇಳೆ ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದ್ದು, ಘಟನೆ ನಡೆದ ತಕ್ಷಣ ಆಟೋವನ್ನು ಎತ್ತಿ ತಾಯಿಯನ್ನು ಮಗಳು ಮೇಲಕ್ಕೆತ್ತಿದ್ದಾಳೆ.
ಘಟನೆಯಲ್ಲಿ ಆಟೋ ಚಾಲಕ, ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬಾಲಕಿ ಧೈರ್ಯ ಹಾಗೂ ಸಮಯ ಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
That girl deserves appreciation 🙌👏 pic.twitter.com/TO22oHk78m
— 👑Che_ಕೃಷ್ಣ🇮🇳💛❤️ (@ChekrishnaCk) September 8, 2024
Mangalore, Kinnigoli auto accident, daughter saving mother video goes viral. In the video, the woman is seen crossing the street when the rickshaw hits her, knocking her to the ground. The accident took place right in front of her young daughter, leaving the girl visibly traumatised.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm