ಬ್ರೇಕಿಂಗ್ ನ್ಯೂಸ್
11-09-24 06:10 pm Mangalore Correspondent ಕರಾವಳಿ
ಮಂಗಳೂರು, ಸೆ.11: ನಗರದ ಹಂಪನಕಟ್ಟೆ ಬಸ್ ನಿಲ್ದಾಣವನ್ನು ಏಕಾಏಕಿ ತೆರವುಗೊಳಿಸಿದ್ದನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಘೆರಾವ್ ಹಾಕಿದ್ದಾರೆ. ಈ ವೇಳೆ ರಸ್ತೆ ತಡೆಗೆ ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
ಹಂಪನಕಟ್ಟೆಯ ಬಸ್ಸು ತಂಗುದಾಣವನ್ನು ಏಕಾಏಕಿ ತೆರವುಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಆಗಿರುವ ಸಮಸ್ಯೆ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ನೀಡಲಾಗಿತ್ತು. ಆದರೂ ಸಮಸ್ಯೆ ಬಗೆಹರಿಯದ್ದನ್ನು ಖಂಡಿಸಿ ಕ್ಲಾಕ್ ಟವರ್ ಬಳಿ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಹಂಪನಕಟ್ಟೆಯಲ್ಲಿ ತೆರವುಗೊಳಿಸಿದ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸ್ಥಳಕ್ಕೆ ಬಂದು ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸುಮಾರು ಅರ್ಧ ಗಂಟೆ ಕಳೆದ ಬಳಿಕವೂ ಸ್ಥಳಕ್ಕೆ ಯಾವ ಅಧಿಕಾರಿಗಳೂ ಬರದೇ ಇದ್ದುದನ್ನು ಕಂಡು ಸಿಟ್ಟಿಗೆದ್ದ ಪ್ರತಿಭಟನಕಾರರು ಏಕಾಏಕಿ ರಸ್ತೆಗೆ ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ರಸ್ತೆಗಿಳಿದ ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.
ಕೊನೆಗೆ, ವಿದ್ಯಾರ್ಥಿಗಳ ಆಗ್ರಹಕ್ಕೆ ಮಣಿದು ಮಂಗಳೂರು ತಹಸೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದು ಬಸ್ ತಂಗುದಾಣ ಸಮಸ್ಯೆಯನ್ನ ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ, ತಾಲೂಕು ಸಂಚಾಲಕ ಶ್ರೇಯಸ್, ಮೋನಿಶ್, ಪ್ರತೀಕ್, ಶಶಾಂಕ್, ನಿಖಿತ್, ಸಾತ್ವಿಕ್ ಇನ್ನಿತರರು ನೇತೃತ್ವ ವಹಿಸಿದ್ದರು.
Mangalore Abvp protests over removal of bus stand near hampanakatta, police resorted to lati charge.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm