ಬ್ರೇಕಿಂಗ್ ನ್ಯೂಸ್
11-09-24 10:50 pm Mangalore Correspondent ಕರಾವಳಿ
ಮಂಗಳೂರು, ಸೆ.11: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್ಸ್ಪೆಕ್ಟರ್ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.
ಆಟೋವನ್ನು ಎತ್ತಿ ತಾಯಿಯನ್ನು ರಕ್ಷಣೆ ಮಾಡಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರೂ ಬಾಲಕಿಯ ಕಾರ್ಯವನ್ನು ಪ್ರಶಂಸಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬಾಲಕಿಯನ್ನು ಕರೆದು ಸನ್ಮಾನಿಸಿದ್ದರು. ಇದೀಗ ಪೊಲೀಸ್ ಕಮಿಷನರ್ ಕೂಡ ಸನ್ಮಾನಿಸಿ ಕರ್ತವ್ಯ ಪಾಲನೆ ಮಾಡಿದ್ದಾರೆ.
Mangalore Daughter saves mother in auto accident at Kinnigoli, police felicitate 7th Std student.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm