ಬ್ರೇಕಿಂಗ್ ನ್ಯೂಸ್
24-09-24 07:23 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮೂಡಾ ಹಗರಣ ಕುರಿತು ಹೈಕೋರ್ಟ್ ತೀರ್ಪಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಮೂಡಾ ಹಗರಣವನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಯಾತ್ರೆ ನಡೆಸಿದ್ದಾಗ, ಇದು ರಾಜಕೀಯ ಷಡ್ಯಂತ್ರ. ಇದರಲ್ಲಿ ಯಾವುದೇ ಹುರುಳಿಲ್ಲ, ನಾನು ರಾಜೀನಾಮೆ ಕೊಡುವುದಿಲ್ಲ, ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತೀರ್ಪು ಕಪಾಳ ಮೋಕ್ಷ ನೀಡಿದೆ. ಇವರ ಹಿಂಬಾಲಕರಂತೂ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ ಎಂದಿದ್ದರು. ಸಾಲದ್ದಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ವಿರುದ್ಧ ಸಚಿವ ಸಂಪುಟ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಈ ಎಲ್ಲಾ ಭ್ರಷ್ಟರಿಗೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಸಿಕ್ಕಿದೆ ಎಂದು ಹೇಳಿದರು.


ಈಗಲಾದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಸಹಕರಿಸಲು ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಉಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನ ಎಲ್ಲಾ ಹಗರಣಗಳು ಬಯಲಿಗೆ ಬರಲಿದ್ದು ಕಾಂಗ್ರೆಸ್ ಸರ್ಕಾರ ಗಂಟು ಮೂಟೆ ಕಟ್ಟುವುದು ನಿಶ್ಚಿತವೆಂದು ಶಾಸಕರು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
Muda scam, BJP MLA Vedavyas kamath holds protest demanding resignation of CM Siddaramaiah. BJP members and leaders gathered for the resignation of CM for involving in muda case.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm