ಬ್ರೇಕಿಂಗ್ ನ್ಯೂಸ್
25-09-24 01:21 pm Mangalore Correspondent ಕರಾವಳಿ
ಮಂಗಳೂರು, ಸೆ.25: ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಕಾಸ್ಮೆಟಿಕ್ ಸರ್ಜರಿ ಮಾಡಲು ಹೋಗಿದ್ದ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ದುರಂತ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಉಳ್ಳಾಲದ ಅಕ್ಕರಕೆರೆ ನಿವಾಸಿ ಮೊಹ್ಮದ್ ಮಾಝಿನ್(32) ಮೃತರು. ಮೊಹ್ಮದ್ ಮಾಝಿನ್ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯನ್ನು ತೆಗೆಸಲು ಕಂಕನಾಡಿ ಬೆಂದೂರ್ ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ಗೆ ಬಂದಿದ್ದ. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು.
ಸರ್ಜರಿಗೆ ಮುಂದಾದ ವೈದ್ಯರು ಮಾಝಿನ್ ಅವರನ್ನು ಕ್ಲಿನಿಕ್ ನಲ್ಲಿ ದಾಖಲು ಮಾಡಿಕೊಂಡಿದ್ದರು. ಬೆಳಗ್ಗೆ ಬಂದವರು ಸಂಜೆಯಾದರೂ ಸರ್ಜರಿ ಮುಗಿದಿರಲಿಲ್ಲ. ಹೊರಗೆ ನಿಂತಿದ್ದ ತಾಯಿ ಮತ್ತು ಪತ್ನಿ ಸಂಶಯಗೊಂಡು ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಜರಿ ಸಂದರ್ಭದಲ್ಲಿ ಅನಸ್ತೇಶಿಯಾ ಕೊಟ್ಟದ್ದು ಓವರ್ ಡೋಸ್ ಆಗಿದೆ ಎನ್ನಲಾಗುತ್ತಿದ್ದು ಅದೇ ಕಾರಣದಿಂದ ಶಸ್ತ್ರಚಿಕಿತ್ಸೆ ಬಳಿಕ ದೇಹ ಸ್ಥಿರತೆಗೆ ಬಂದಿರಲಿಲ್ಲ.
ಮಾಝಿನ್ ಎರಡು ವರ್ಷದ ಹಿಂದೆ ಮದುವೆಯಾಗಿದ್ದು ಮಕ್ಕಳಾಗಿರಲಿಲ್ಲ. ಈತನ ಅಣ್ಣನೂ ನಾಲ್ಕು ವರ್ಷಗಳ ಹಿಂದೆ ಅಕಾಲಿಕ ಸಾವು ಕಂಡಿದ್ದರು. ಇವರ ಹೆತ್ತವರಿಗೆ ಇಬ್ಬರೇ ಪುತ್ರರಾಗಿದ್ದು ಇಬ್ಬರೂ ದುರಂತ ಸಾವು ಕಂಡಿದ್ದು ಕುಟುಂಬಸ್ಥರನ್ನು ತೀವ್ರ ಶೋಕಕ್ಕೀಡು ಮಾಡಿದೆ.
A 32-year-old man from Ullal, Muhammad Mazin, tragically passed away following a cosmetic surgery procedure at the "Flount" Hair Transplant Clinic in Kankanadi. The family has accused the clinic of negligence, claiming that errors during the surgery led to his death.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am