ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ದ.ಕ. ಜಿಲ್ಲೆ : 8 ಸಾವು, 198 ಮಂದಿಗೆ ಪಾಸಿಟಿವ್‌

31-07-20 07:36 am       Mangalore Correspondant   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇವೇಳೆ ಬುಧವಾರ ಮತ್ತು ಗುರುವಾರ ಮೃತಪಟ್ಟ ಎಂಟು ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇವೇಳೆ ಬುಧವಾರ ಮತ್ತು ಗುರುವಾರ ಮೃತಪಟ್ಟ ಎಂಟು ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಕೋವಿಡ್ ದೃಢಪಟ್ಟ 27 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 80 ಮಂದಿಗೆ ಇನ್‌ಫ್ಲೂಯೆನ್ಜ್ ಲೈಕ್‌ ಇಲ್‌ನೆಸ್‌, 14 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ನಾಲ್ವರಿಗೆ ಅಂತಾರಾಷ್ಟ್ರೀಯ ಪ್ರಯಾಣದಿಂದ ಸೋಂಕು ತಗಲಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.

ಕೋವಿಡ್ ಮುಕ್ತರಾಗಿ 105 ಮಂದಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 5,509 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2,561 ಮಂದಿ ಗುಣಮುಖರಾಗಿದ್ದಾರೆ. 2,800 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಮೃತಪಟ್ಟ ಎಂಟು ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಗುರುವಾರ ಸ್ವೀಕೃತವಾಗಿದ್ದು, ಎಲ್ಲರಿಗೂ ಕೋವಿಡ್ ಇರುವುದು ದೃಢಪಟ್ಟಿದೆ. ಎಲ್ಲ ಮರಣಗಳ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಮೃತ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ಪತ್ತೆ
– ಪುತ್ತೂರಿನ 36ರ ಮಹಿಳೆ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ಸೆಪ್ಟಿಕ್‌ ಶಾಕ್‌, ರೇನಲ್‌ ಫೈಲ್ಯೂರ್‌ನಿಂದ ಬಳಲುತ್ತಿದ್ದರು.

-ಮಂಗಳೂರಿನ 60ರ ಮಹಿಳೆ ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ರೆಸ್ಪಿರೇಟರಿ ಫೈಲ್ಯೂರ್‌ನಿಂದ ಬಳಲುತ್ತಿದ್ದರು.

– ದಾವಣಗೆರೆ ಮೂಲದ 60ರ ಮಹಿಳೆ ಜು. 23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯೂಟ್‌ ರೆಸ್ಪಿರೇಟರಿ ಇನ್‌ಫೆಕ್ಷನ್‌, ಡಯಾಬಿಟಿಸ್‌, ಹೈಪರ್‌ಟೆನ್ಷನ್‌ನಿಂದ ಬಳಲುತ್ತಿದ್ದರು.

– ಮಂಗಳೂರಿನ 57ರ ವ್ಯಕ್ತಿ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ 29ರಂದು ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು.

– ಮೈಸೂರಿನ 75ರ ವೃದ್ಧ ಜು. 26ರಂದು ವೆನಾÉಕ್‌ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ, ನ್ಯುಮೋನಿಯಾದಿಂದ ಬಳಲುತ್ತಿದ್ದರು.

– ಪುತ್ತೂರಿನ 64ರ ವ್ಯಕ್ತಿ ಜು. 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾದಿಂದ ಬಳಲುತ್ತಿದ್ದರು.

– ಮಂಗಳೂರಿನ 52 ವರ್ಷದ ವ್ಯಕ್ತಿ ಜು. 28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯುಟ್‌ ಕೊರೊನರಿ ಈವೆಂಟ್‌ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದರು.

– ಮಂಗಳೂರಿನ 87ರ ವೃದ್ಧೆ ಜು. 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.