ಬ್ರೇಕಿಂಗ್ ನ್ಯೂಸ್
09-10-24 11:28 pm Mangalore Correspondent ಕರಾವಳಿ
ಮಂಗಳೂರು, ಅ.9: ತುಳುನಾಡಿನ ಮಣ್ಣಿನ ಕಲೆಯಾದ ಹುಲಿ ವೇಷ ಕುಣಿತವನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಆಯೋಜಿಸಿರುವ "ಕುಡ್ಲದ ಪಿಲಿ ಪರ್ಬ" ಉತ್ಸವದ ಮೂರನೇ ಆವೃತ್ತಿಯ ಸ್ಪರ್ಧಾಕೂಟ ಇದೇ ಅ.11ರ ಶುಕ್ರವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾಡಲಿದ್ದಾರೆ.
ಜಿಲ್ಲೆ, ರಾಜ್ಯ, ದೇಶ, ವಿದೇಶಗಳಲ್ಲಿ ಪ್ರದರ್ಶನ ನೀಡಿರುವ ಕರಾವಳಿಯ ಜನಪ್ರಿಯ 10 ಹುಲಿವೇಷ ತಂಡಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳಲಿದ್ದು, ಇಡೀ ದಿನ ಕಡಲನಗರಿ ಹುಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ. ಪಿಲಿಪರ್ಬದಲ್ಲಿ ಭಾಗವಹಿಸುವ ಹುಲಿವೇಷ ತಂಡಗಳು ವೈಭವದ ಮೆರವಣಿಗೆಯ ಮೂಲಕ ವೇದಿಕೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಪ್ರತಿ ತಂಡವೂ ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು, ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿದೆ.

ಅಂತಿಮವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ, ಪ್ರಥಮ-ದ್ವಿತೀಯ-ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು. ಜೊತೆಗೆ ಶಿಸ್ತಿನ ತಂಡ, ಅತ್ಯುತ್ತಮ ಹುಲಿ ಮೆರವಣಿಗೆ ತಂಡ, ಪರ್ಬದ ಪಿಲಿ, ಕಪ್ಪು ಪಿಲಿ, ಮರಿ ಹುಲಿ, ಮುಡಿ, ತಾಸೆ, ಬಣ್ಣಗಾರಿಕೆ, ಧರಣಿ ಮಂಡಲ ಬಹುಮಾನವನ್ನೂ ನೀಡಲಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇದಕ್ಕಾಗಿ ಹತ್ತು ಮಂದಿ ತೀರ್ಪುಗಾರರು ಇರಲಿದ್ದಾರೆ.
ಈ ಬಾರಿ, ರಾಷ್ಟ್ರಪ್ರಶಸ್ತಿ ವಿಜೇತ ಕರಾವಳಿಯ ಹೆಮ್ಮೆ ರಿಷಬ್ ಶೆಟ್ಟಿ, ಕನ್ನಡ ಚಿತ್ರರಂಗದಲ್ಲಿ ತನ್ನ ಅದ್ಭುತ ಪ್ರತಿಭೆ ಮೂಲಕ ಮಿಂಚುತ್ತಿರುವ ರಾಜ್ ಬಿ. ಶೆಟ್ಟಿ, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಅನೂಪ್ ಸಾಗರ್, ಶನಿಲ್ ಗುರು, ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಅರ್ಜುನ್ ಕಾಪಿಕಾಡ್, ಸಮಿತಾ ಅಮೀನ್, ವಿನೀತ್ ಕುಮಾರ್, ಸೇರಿದಂತೆ ಅನೇಕ ಜನಪ್ರಿಯ ವ್ಯಕ್ತಿಗಳು ಪಿಲಿಪರ್ಬಕ್ಕೆ ಆಗಮಿಸಲಿದ್ದಾರೆ. ಸ್ಪರ್ಧಾಕೂಟ ನಡೆಯುವಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಬಹುದಾದ ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿದೆ. ಹಿರಿಯರು ಹಾಗೂ ಮಕ್ಕಳಿಗಾಗಿ ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಿಸಲು ನೇರ ಪ್ರಸಾರದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ, ಬಿಲ್ಡರ್ ಗಿರಿಧರ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
Talking to reporters here on Wednesday, prathishtana honorary president Giridhar Setty said they restricted entry to 10 teams because of the prevailing code of conduct for byelection to Karnataka Legislative Council’s Dakshina Kannada Local Authorities Constituency. As many as 15 teams participated in the inaugural edition, while 12 teams took in the second edition in 2023.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm