ಬ್ರೇಕಿಂಗ್ ನ್ಯೂಸ್
10-10-24 10:04 pm Mangalore Correspondent ಕರಾವಳಿ
ಸುರತ್ಕಲ್, ಅ.10: ಮುಮ್ತಾಜ್ ಅಲಿ ಸಾವಿಗೆ ಕಾರಣನಾದ ಅಬ್ದುಲ್ ಸತ್ತಾರ್ ಜೈಲಿನಿಂದ ಬರೋತನಕ ಕಾಯ್ಬೇಕು, ಅವನನ್ನು ಬದುಕಲು ಬಿಡಬಾರದು, ಆತ ನಾಗರಿಕ ಸಮಾಜದಲ್ಲಿರಲು ಯೋಗ್ಯನಲ್ಲ. ನಾವು ಇಂದು ಆತನನ್ನು ಬಿಟ್ಟರೆ ನಾಳೆಯ ದಿನ ಇನ್ನಷ್ಟು ಮಂದಿ ಕೂಳೂರು ಸೇತುವೆಯಿಂದ ಹಾರುವ ಸನ್ನಿವೇಶ ಬರಬಹುದು. ಆತನನ್ನು ಒಂದೊಮ್ಮೆ ನೀವು ಬಿಟ್ಟರೂ ನಾನು ಬಿಡುವುದಿಲ್ಲ. ಆತ ಜೈಲಿನಿಂದ ಹೊರಗೆ ಬರುವ ತನಕ ಕಾಯುತ್ತೇನೆ ಎಂದು ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ ಗುಡುಗಿದ್ದಾರೆ.
ಅವರು ಗುರುವಾರ ಸಂಜೆ ಸುರತ್ಕಲ್ ಜಂಕ್ಷನ್ ನಲ್ಲಿ ಮುಮ್ತಾಜ್ ಅಲಿ ಅಭಿಮಾನಿ ಬಳಗದಿಂದ ನಡೆದ ಬೃಹತ್ ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ ಮಾತಾಡಿದರು. “ಸತ್ತಾರ್ ನನಗೆ ಕೊಟ್ಟಿರುವ ಹಿಂಸೆ ಇನ್ಯಾರಿಗೂ ಕೊಡುವುದು ಬೇಡ. ನಾನೊಬ್ಬ ಹಿಂದೂ ಮಹಿಳೆಯಾಗಿದ್ದಕ್ಕೆ ಆತನನ್ನು ಎದುರಿಸಿ ಇನ್ನೂ ಗಂಡ ಮಕ್ಕಳ ಜೊತೆಗೆ ಬದುಕಿದ್ದೇನೆ. ಆತ ನನ್ನಿಂದ ಪೆಟ್ಟು ತಿಂದ ಮೇಲೂ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ನನ್ನ ಹಿಂದೆ ಬಂದು ನಿಂತು ಫೋಟೋ ತೆಗೆಸಿ ಹಾಕುತ್ತಿದ್ದ. ಆತನಿಗೆ 5 ತಿಂಗಳ ಹಿಂದೆ ನಾನೇ ಎಚ್ಚರಿಕೆ ಕೊಟ್ಟಿದ್ದೇನೆ. ಇನ್ನೊಮ್ಮೆ ನನ್ನ ಹಿಂದೆ ಫೋಟೋದಲ್ಲಿ ಕಾಣಿಸಿಕೊಂಡರೆ ನಿನ್ನ ಕೈ ಕಡಿಯುವುದಲ್ಲ, ಕತ್ತು ಕಡಿಯುವುದಾಗಿ ಹೇಳಿದ್ದೆ. ಅವತ್ತು ಹಿಂದೂ ಹೆಣ್ಣು ಮಕ್ಕಳ ವಿಚಾರದಲ್ಲಿ ಆತನ ಕೈ ಕಡಿಯುವ ಬದಲು ತಲೆ ಕಡಿದಿದ್ದರೆ ಇಂದು ಮುಮ್ತಾಜ್ ಅಲಿಯಂತಹವರು ಸಾಯುತ್ತಿರಲಿಲ್ಲ“ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಿಸ್ಬಾ ಮಹಿಳಾ ಕಾಲೇಜ್ ಟ್ರಸ್ಟ್ ಕಾರ್ಯದರ್ಶಿ ಅಬ್ದುಲ್ ರಫೀಕ್ ಜೈನಿ ಕಾಮಿಲ್ ಸಖಾಫಿ ಅವರು ಮಾತನಾಡಿ, “ಮುಮ್ತಾಜ್
ಅಲಿ ಅವರು ಸತ್ತಿದ್ದಲ್ಲ, ವ್ಯವಸ್ಥಿತವಾಗಿ ಕೊಲೆ ಮಾಡಲಾಗಿದೆ. ಆರೋಪಿಗಳನ್ನು ಕಾನೂನಿನ ಕುಣಿಕೆಯಲ್ಲಿ ಬಿಗಿದು ಶಿಕ್ಷಸಬೇಕು. ನಾಗರಿಕ ಸಮಾಜಕ್ಕೆ ಕಳಂಕವಾಗಿರುವ ಹನಿ ಟ್ರ್ಯಾಪ್ ನಂತಹ ದುಷ್ಟ ಕೃತ್ಯವನ್ನು ಮಾಡಿರುವ ತಂಡವನ್ನು ಮಟ್ಟ ಹಾಕಬೇಕು. ತಮ್ಮ ಸಾಮಾಜಿಕ ಜೀವನದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದ ಮುಮ್ತಾಜ್ ಅಲಿ ಅವರು ತಮ್ಮ ಮೇಲೆ ಬಂದ ಆಪಾದನೆಯನ್ನು ಎದುರಿಸಲಾಗದೆ ಅವಮಾನದಿಂದ ತಮ್ಮ ಜೀವವನ್ನೇ ಬಲಿ ತೆಗೆದುಕೊಂಡಿದ್ದಾರೆ. ಪೊಲೀಸ್ ಇಲಾಖೆ ಈ ಬಗ್ಗೆ ಗಂಭೀರವಾಗಿ ಯೋಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸಜ್ಜನರಾಗಿದ್ದ ಮುಮ್ತಾಜ್ ಅಲಿಯವರು ಸಮಾಜಕ್ಕೆ ತಮ್ಮಿಂದಾದ ಸಹಾಯ ಮಾಡುತ್ತ ಮುಂಚೂಣಿಯಲ್ಲಿ ಇರುತ್ತಿದ್ದವರು. ಈ ಘಟನೆಯಲ್ಲಿ ಇನ್ನಷ್ಟು ಕಾಣದ ಕೈಗಳು ಇರುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳು ಆರೋಪಿಗಳು ನೇಣಿಗೆ ಏರುವ ವರೆಗೆ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು“ ಎಂದರು.
ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಮಾತನಾಡಿ, ”ತನ್ನ ಜೊತೆ ಇದ್ದವರು ಊಟ ಹಾಕಿದವರನ್ನೇ ಇಂದು ಕೊಲ್ಲುತ್ತಾರೆ ಎಂದರೆ ನಮ್ಮ ಸಮಾಜದಲ್ಲಿ ಇನ್ನೂ ಅಂಥವರು ಇದ್ದಾರೆ. ಅವರನ್ನು ನಮ್ಮ ಜಮಾತ್ ನಲ್ಲಿಟ್ಟು ಬೆಳೆಸುತ್ತಿರುವುದು, ಅವರನ್ನು ಗುರುತಿಸುವಲ್ಲಿ ವಿಫಲರಾಗಿರುವುದು ನಮ್ಮ ದೊಡ್ಡ ತಪ್ಪು. ನಮ್ಮ ಮಸೀದಿ, ಸಾಮಾಜಿಕ ಸಂಘಟನೆಗಳಿಂದ ಅಂಥವರನ್ನು ದೂರವಿಡಬೇಕು. ಮುಂದೆ ಇನ್ನಷ್ಟು ಮಂದಿ ಮೋಸದ ಜಾಲಕ್ಕೆ ಬಲಿಯಾಗ್ಬಾರ್ದು. ಆ ಜವಾಬ್ದಾರಿಯನ್ನು ನಾವು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಹೋರಾಟದ ಅಗತ್ಯವಿದೆ ಎಂದರು.
ಪೊಲೀಸ್ ಇಲಾಖೆ ಇಂತಹ ಪ್ರಕರಣ ಗಂಭೀರವಾಗಿ ಪರಿಗಣಿಸುವುದಿಲ್ಲ. ಆರೋಪಿಗಳಿಂದ ಸಿಗುವ ವಿಡಿಯೋ ಸಾಕ್ಷಿಗಳನ್ನೇ ಬಂಡವಾಳ ಮಾಡಿಕೊಂಡು ಅದರ ಮುಖಾಂತರ ಆರೋಪಿಗಳ ಬಳಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿ ಜಿಲ್ಲೆ ತೊರೆದಿರುವ ಅದೆಷ್ಟೋ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕಂಡಿದ್ದೇವೆ. ಇದರಲ್ಲಿ 6 ಮಂದಿ ಆರೋಪಿಗಳಲ್ಲ 60 ಮಂದಿ ಇರಬಹುದು. ಅವರನ್ನು ಕಂಬಿಯ ಹಿಂದೆ ತಳ್ಳುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು. ಆರೋಪಿಗಳನ್ನು ಜಮಾತ್ ನಿಂದ ಹೊರಗಡೆ ಹಾಕಲು ಮೀನಾಮೇಷ ಎಣಿಸಬೇಕಿಲ್ಲ ತಕ್ಷಣವೇ ಹೊರಗೆ ಹಾಕಬೇಕು“ ಎಂದು ಆಗ್ರಹಿಸಿದರು.
ಬಳಿಕ ಎಸಿಪಿ ಶ್ರೀಕಾಂತ್ ಮೂಲಕ ಪೊಲೀಸ್ ಇಲಾಖೆಗೆ ಮನವಿಯನ್ನು ಅರ್ಪಿಸಲಾಯಿತು.
ಮಿಸ್ಬಾ ಕಾಲೇಜು ಪ್ರಾಂಶುಪಾಲೆ ಝಯೀದಾ ಜಲೀಲ್, ಕಾರ್ಪೋರೇಟರ್ ಸಂಶಾದ್ ಅಬೂಬಕರ್, ಹ್ಯಾರಿಸ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು.
Mumtaz Ali suicide case, prime accused Abdul Sattar should have been beheaded says Prathibha Kulai in Mangalore. Abdul Sattar should be killed we should not allow him to be inside the jail she added. Mumtaz Ali commited suicide after been blackmailed of sex video.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm